ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾದಲ್ಲಿ ₹ 100ರ ಗಡಿ ದಾಟಿದ ಡೀಸೆಲ್‌

Last Updated 22 ಜೂನ್ 2021, 14:19 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರ ಇಂಧನ ದರ ಹೆಚ್ಚಿಸಿದ್ದು, ಒಡಿಶಾದಲ್ಲಿ ಡೀಸೆಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿದೆ.

ಮಂಗಳವಾರ ಪೆಟ್ರೋಲ್‌ ದರ 28 ಪೈಸೆ, ಡೀಸೆಲ್‌ ದರ 26 ಪೈಸೆ ಹೆಚ್ಚಾಗಿದೆ. ಹೀಗಾಗಿ ದೇಶದ ಹಲವು ಭಾಗಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿದೆ.

ಮೇ 4ರಿಂದ ಇಲ್ಲಿಯವರೆಗೆ ಒಟ್ಟಾರೆ 28 ಬಾರಿ ದರ ಹೆಚ್ಚಿಸಲಾಗಿದೆ. ಈ ಅವಧಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ದರ ₹ 7.10ರಷ್ಟು ಮತ್ತು ಡೀಸೆಲ್‌ ದರ ₹ 7.50ರಷ್ಟು ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಪೆಟ್ರೋಲ್‌ ದರ ₹ 100.76 ಮತ್ತು ಡೀಸೆಲ್‌ ದರ ₹ 93.54ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT