ಗುರುವಾರ , ಅಕ್ಟೋಬರ್ 29, 2020
21 °C

ಕೃಷಿ ಉತ್ಪನ್ನಗಳ ರಫ್ತು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಬಿಕ್ಕಟ್ಟಿನ ಹೊರತಾಗಿಯೂ ಕೃಷಿ ಉತ್ಪನ್ನಗಳ ರಫ್ತು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ಶೇ 43.4ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಮಾಹಿತಿ ನೀಡಿದೆ.

ಮೌಲ್ಯದ ಲೆಕ್ಕದಲ್ಲಿ ₹ 53,626 ಕೋಟಿಗಳಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 37,397 ಕೋಟಿ ಇತ್ತು ಎಂದು ಅದು ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ ರಫ್ತು ವಹಿವಾಟು ಶೇ 81.7ರಷ್ಟು ಹೆಚ್ಚಾಗಿದ್ದು, ಮೌಲ್ಯದ ಲೆಕ್ಕದಲ್ಲಿ ₹ 5,114 ಕೋಟಿಗಳಿಂದ ₹ 9,296 ಕೋಟಿಗಳಿಗೆ ಏರಿಕೆಯಾಗಿದೆ.

ಶೇಂಗಾ, ಗೋಧಿ, ಸಕ್ಕರೆ, ಬಾಸ್ಮತಿ ಅಕ್ಕಿ ರಫ್ತು ಹೆಚ್ಚಾಗಿದೆ. ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ಸುಧಾರಣಾ ಕ್ರಮಗಳಿಂದಾಗಿ ಕೃಷಿ ಉತ್ಪನ್ನಗಳ ರಫ್ತು ಹೆಚ್ಚಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು