ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಇಂಡಿಯಾ: ಕ್ಯಾಬಿನ್‌ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಿ

Published 12 ಮೇ 2024, 14:14 IST
Last Updated 12 ಮೇ 2024, 14:14 IST
ಅಕ್ಷರ ಗಾತ್ರ

ಮುಂಬೈ/ ನವದೆಹಲಿ: ಆಡಳಿತ ಮಂಡಳಿಯ ಅಸಮರ್ಪಕ ನಿರ್ವಹಣೆ ಖಂಡಿಸಿ ಅನಾರೋಗ್ಯದ ರಜೆಯ ಮೇಲೆ ತೆರಳಿದ್ದ ಕ್ಯಾಬಿನ್‌ ಸಿಬ್ಬಂದಿ ಕರ್ತವ್ಯ ಮರಳಿದ್ದು, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಕಂಪನಿಯ ವಿಮಾನ ಸೇವೆಯು ನಿಧಾನಗತಿಯಲ್ಲಿ ಯಥಾಸ್ಥಿತಿಗೆ ಮರಳುತ್ತಿದೆ. 

ಟಾಟಾ ಸಮೂಹಕ್ಕೆ ಸೇರಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ 380 ವಿಮಾನಗಳು ಪ್ರತಿದಿನ ಕಾರ್ಯಾಚರಣೆ ನಡೆಸುತ್ತವೆ. ಈ ಪೈಕಿ ಭಾನುವಾರ 20 ವಿಮಾನಗಳ ಹಾರಾಟ ರದ್ದಾಗಿದೆ. ಮಂಗಳವಾರದ ವೇಳೆಗೆ ಪ್ರಯಾಣಿಕರಿಗೆ ಪೂರ್ಣ ಪ್ರಮಾಣದಲ್ಲಿ ಸೇವೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಈ ಕುರಿತು ಕಂಪನಿಯು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ರಜೆಯ ಮೇಲೆ ತೆರಳಿದ್ದ 200ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಿಬ್ಬಂದಿ ಕಡೆಯಿಂದ ಸೇವೆಯಲ್ಲಿ ವಿಳಂಬವಾಗಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಸಂಘ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT