ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರ್‌ ಇಂಡಿಯಾ ಮಾರಾಟ: ನವೆಂಬರ್‌ನಲ್ಲಿ ಬಿಡ್‌ ಸಾಧ್ಯತೆ

Last Updated 20 ಅಕ್ಟೋಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಶೇ 100ರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರವು ನವೆಂಬರ್‌ನಲ್ಲಿ ಪ್ರಾಥಮಿಕ ಬಿಡ್‌ ಕರೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಏರ್‌ ಇಂಡಿಯಾ ಖರೀದಿಗೆ ಈಗಾಗಲೇ ಕೆಲವು ಸಂಸ್ಥೆಗಳು ಆಸಕ್ತಿ ತೋರಿಸಿವೆ. ಖರೀದಿ ಆಸಕ್ತಿ ಪತ್ರವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ತಿಳಿಸಿವೆ.

ಇ–ಹರಾಜಿನ ಮೂಲಕ ‘ಎಐ‘ ಹರಾಜು ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.ನಷ್ಟದಲ್ಲಿರುವ ವಿಮಾನಯಾನ ಸಂಸ್ಥೆಯು₹ 58 ಸಾವಿರ ಕೋಟಿ ಸಾಲ ಬಾಕಿ ಉಳಿಸಿಕೊಂಡಿದೆ.

ನಾಗರಿಕ ವಿಮಾನಯಾನ ಕಾರ್ಯದರ್ಶಿ ಪ್ರದೀಪ್‌ ಸಿಂಗ್ ಖರೋಲಾ ಅವರು ಕಳೆದವಾರ ಸಂಸ್ಥೆಯ ಸ್ಥಿತಿಗತಿಯ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ಮಂಗಳವಾರ ಸಂಸ್ಥೆಯ ಆಡಳಿತ ಮಂಡಳಿ ಸಭೆ ನಡೆಯಲಿದ್ದು, 2019ರ ಮಾರ್ಚ್‌ ಅಂತ್ಯಕ್ಕೆ ಹಣಕಾಸು ವರದಿಗೆ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT