ಮುಂಬೈ (ಪಿಟಿಐ): ನಿಯಮಗಳನ್ನು ಉಲ್ಲಂಘಿಸಿದ 1 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ಏರ್ ಇಂಡಿಯಾ ಕಂಪನಿಯು ಕಳೆದ ಮೂರು ವರ್ಷಗಳಲ್ಲಿ ಕೆಲಸದಿಂದ ವಜಾ ಮಾಡಿದೆ.

ಸಿಬ್ಬಂದಿಯು ವಿಮಾನದಲ್ಲಿ ವಸ್ತುಗಳನ್ನು ಕಳ್ಳಸಾಗಣೆ ಮಾಡುವುದು, ಶುಲ್ಕ ವಿಧಿಸದೇ ಹೆಚ್ಚಿನ ಲಗೇಜುಗಳಿಗೆ ಅನುಮತಿ ನೀಡುವ ಕೆಲಸ ಮಾಡಿದ ನಿದರ್ಶನಗಳು ಇವೆ. ಅಲ್ಲದೆ, ನೂರಾರು ಸಿಬ್ಬಂದಿಯು ಪ್ರವಾಸ (ಇಎಲ್ಟಿ) ಸವಲತ್ತನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್ಬೆಲ್ ವಿಲ್ಸನ್ ಹೇಳಿದ್ದಾರೆ.

ನಿಯಮಗಳನ್ನು ಪಾಲಿಸದಿದ್ದಕ್ಕೆ ಪ್ರತಿ ವರ್ಷ ನೂರಾರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸಿಬ್ಬಂದಿಯು ಶಿಸ್ತುಬದ್ಧವಾಗಿ ನಡೆದುಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಟಾಟಾ ಸಮೂಹದ ಏರ್ ಇಂಡಿಯಾದಲ್ಲಿ ಪ್ರಸ್ತುತ 24 ಸಾವಿರ ಸಿಬ್ಬಂದಿ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-143433733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.