ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣ: ಸಚಿವ ಮುರುಗೇಶ್ ನಿರಾಣಿ

Last Updated 15 ಸೆಪ್ಟೆಂಬರ್ 2021, 15:54 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಚಿಂತನೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‍ಕೆಸಿಸಿಐ) ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ನಡೆಸಲಾಗುವುದು. ಅಗತ್ಯವಿರುವ ಕಡೆ ಹೆಲಿಪ್ಯಾಡ್‍ ಕೂಡ ನಿರ್ಮಿಸಲಾಗುವುದು. ಇದರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ, ಉದ್ಯೋಗಾವಕಾಶ ಸೃಷ್ಟಿ ಆಗುತ್ತದೆ’ ಎಂದರು.

‘ಹೊಸ ಉದ್ಯಮ ಆರಂಭಿಸಲು ಮುಂದಾಗುವವರಿಗೆ ರತ್ನಗಂಬಳಿ ಹಾಸಿ ಬರಮಾಡಿಕೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT