ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣಗಳಲ್ಲಿ ₹ 90 ಸಾವಿರ ಕೋಟಿ ಹೂಡಿಕೆ

Last Updated 24 ನವೆಂಬರ್ 2021, 15:25 IST
ಅಕ್ಷರ ಗಾತ್ರ

ನವದೆಹಲಿ: ದೇಶದ ವಿಮಾನ ನಿಲ್ದಾಣಗಳಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಒಟ್ಟು ₹ 90 ಸಾವಿರ ಕೋಟಿ ಹೂಡಿಕೆ ಆಗುವ ನಿರೀಕ್ಷೆ ಇದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಲ್ ಅವರು ಹೇಳಿದ್ದಾರೆ.

₹ 90 ಸಾವಿರ ಕೋಟಿ ಹೂಡಿಕೆಯಲ್ಲಿ ಖಾಸಗಿ ವಲಯದ ಪಾಲು ₹ 68 ಸಾವಿರ ಕೋಟಿ ಆಗಲಿದೆ ಎಂದು ಅಂದಾಜು ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಕೋವಿಡ್‌–19 ಸಾಂಕ್ರಾಮಿಕದ ಕಾರಣದಿಂದಾಗಿ ತೀವ್ರ ತೊಂದರೆಗೆ ಸಿಲುಕಿದ್ದ ನಾಗರಿಕ ವಿಮಾನಯಾನ ವಲಯವು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ದೇಶಿ ವಿಮಾನ ಸಂಚಾರ ಪ್ರಮಾಣವು ಕೋವಿಡ್‌ಗೂ ಮೊದಲಿನ ಹಂತಕ್ಕೆ ಬರುತ್ತಿದೆ.

ವಿಮಾನ ನಿಲ್ದಾಣಗಳಲ್ಲಿ ಆಗಲಿರುವ ಒಟ್ಟು ಹೂಡಿಕೆಯಲ್ಲಿ ₹ 20 ಸಾವಿರ ಕೋಟಿಯಿಂದ ₹ 22 ಸಾವಿರ ಕೋಟಿವರೆಗಿನ ಮೊತ್ತವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೂಡಿಕೆ ಮಾಡಲಿದೆ. ಇನ್ನುಳಿದ ಮೊತ್ತವನ್ನು ಖಾಸಗಿ ಕಂಪನಿಗಳು ಹೂಡಿಕೆ ರೂಪದಲ್ಲಿ ವಿನಿಯೋಗಿಸಲಿವೆ.

ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಒಟ್ಟು 220 ವಿಮಾನ ನಿಲ್ದಾಣಗಳು, ಹೆಲಿಕಾಪ್ಟರ್ ನಿಲ್ದಾಣಗಳು ಕಾರ್ಯಾಚರಿಸುವಂತೆ ಆಗಬೇಕು ಎಂಬ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈಗ ದೇಶದಲ್ಲಿ ಒಟ್ಟು 136 ವಿಮಾನ ನಿಲ್ದಾಣಗಳು ಕಾರ್ಯಾಚರಿಸುತ್ತ ಇವೆ. ಹಲವೆಡೆ ಸಣ್ಣ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿ ಇದೆ.

ಉತ್ತರ ಪ್ರದೇಶದ ಜೇವರ್‌ನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಗೋವಾದ ಮೋಪಾದಲ್ಲಿ ಹೊಸ ವಿಮಾನ ನಿಲ್ದಾಣವೊಂದು ಮುಂದಿನ ವರ್ಷ ಸಿದ್ಧವಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಸಣ್ಣ ವಿಮಾನ ನಿಲ್ದಾಣವೊಂದು ತಲೆ ಎತ್ತುತ್ತಿದೆ. ದೆಹಲಿ, ಬೆಂಗಳೂರು ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ವಿಸ್ತರಣಾ ಕಾರ್ಯಗಳು ನಡೆಯುತ್ತಿವೆ.

‘ನಾಗರಿಕ ವಿಮಾನಯಾನ ಉದ್ಯಮವು ಪುಟಿದೇಳಲಿದೆ. ಈ ಹಿಂದಿಗಿಂತಲೂ ಹೆಚ್ಚಿನ ಪ್ರಮಾಣದ ಬೆಳವಣಿಗೆಯನ್ನು ನಾವು ಕಾಣಲಿದ್ದೇವೆ’ ಎಂದು ಬನ್ಸಲ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT