ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5ಜಿ: ಏರ್‌ಟೆಲ್‌, ಕ್ವಾಲ್ಕಂ ಸಹಯೋಗ

Last Updated 23 ಫೆಬ್ರುವರಿ 2021, 14:19 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ 5ಜಿ ತಂತ್ರಜ್ಞಾನ ಅಭಿವೃದ್ಧಿಗೆ ವೇಗ ನೀಡಲು ದೂರಸಂಪರ್ಕ ಸೇವಾ ಕಂಪನಿ ಭಾರ್ತಿ ಏರ್‌ಟೆಲ್‌ ಮತ್ತು ಅಮೆರಿಕದ ಚಿಪ್‌ ತಯಾರಿಕಾ ಕಂಪನಿ ಕ್ವಾಲ್ಕಂ ಒಪ್ಪಂದ ಮಾಡಿಕೊಂಡಿವೆ.

ಮೊಬೈಲ್‌ಗೆ ಬಳಕೆಗೆ ಆದ್ಯತೆ ನೀಡುತ್ತಿರುವ ಇಂದಿನ ಸಮಾಜದಲ್ಲಿ ಎಲ್ಲೆಡೆಯೂ ಸಂಪರ್ಕ ಕಲ್ಪಿಸುವುದು ಸವಾಲಾಗಿದೆ. ಹೀಗಾಗಿ ‌ದೇಶದಾದ್ಯಂತ ಅತ್ಯಂತ ಕಡಿಮೆ ವೆಚ್ಚದಲ್ಲಿ ಬ್ರಾಡ್‌ಬ್ಯಾಂಡ್‌ ಸೇವೆಗಳನ್ನು ಅತ್ಯಂತ ವೇಗವಾಗಿ ಒದಗಿಸಲು ಈ ಸಹಯೋಗವು ನೆರವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏರ್‌ಟೆಲ್‌ನ 5ಜಿ ಸಂಪರ್ಕವು ಗಿಗಾಬೈಟ್‌ ವೇಗದ ಇಂಟರ್‌ನೆಟ್‌ ಸೇವೆಗಳನ್ನು ಗ್ರಾಹಕರಿಗೆ ಒದಗಿಸಲಿದೆ.

‘ಭಾರತದಲ್ಲಿ ವಿಶ್ವ ದರ್ಜೆಯ 5ಜಿ ಸೌಲಭ್ಯವನ್ನು ಜಾರಿಗೊಳಿಸುವ ನಮ್ಮ ಪ್ರಯಾಣದಲ್ಲಿ ಕ್ವಾಲ್ಕಂ ಟೆಕ್ನಾಲಜೀಸ್ ಪ್ರಮುಖ ತಂತ್ರಜ್ಞಾನ ಪೂರೈಕೆದಾರರಾಗಿರುವುದಕ್ಕೆ ನಾವು ಸಂತೋಷಪಡುತ್ತೇವೆ’ ಎಂದು ಭಾರ್ತಿ ಏರ್‌ಟೆಲ್‌ನ ಮುಖ್ಯ ತಾಂತ್ರಿಕ ಅಧಿಕಾರಿ (ಸಿಟಿಒ) ರಣ್‌ದೀಪ್‌ ಸೇಖನ್‌ ಹೇಳಿದ್ದಾರೆ.

‘ಈ ಸಹಯೋಗವು 5ಜಿ ನೆಟ್‌ವರ್ಕ್ ವ್ಯಾಪ್ತಿ ಮತ್ತು ಸಾಮರ್ಥ್ಯವನ್ನು ವೃದ್ಧಿಸುವ ಏರ್‌ಟೆಲ್‌ನ ಯೋಜನೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿದೆ’ ಎಂದು ಕ್ವಾಲ್ಕಂ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನ ಉಪಾಧ್ಯಕ್ಷ ರಾಜನ್‌ ವಗಾಡಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT