ನ್ಯೂಯಾರ್ಕ್: ಅಮೆಜಾನ್ ಕಂಪನಿಯು ಮೇ 1 ರಿಂದ ಜಾರಿಗೆ ಬರುವಂತೆ ತನ್ನ ನೌಕರರಿಗೆ ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ಮಾಡುವಂತೆ ಹೇಳಿದೆ.

ಈ ಸಂಬಂಧ ಸದ್ಯ ಇರುವ ನಿಯಮದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಪ್ರಮುಖ ಹುದ್ದೆಯಲ್ಲಿ ಇರುವವರು ತಮ್ಮ ತಂಡವು ಹೇಗೆ ಕಾರ್ಯನಿರ್ವಹಿಸಲಿದೆ ಎನ್ನುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಂಪನಿಯ ಸಿಇಒ ಆ್ಯಂಡಿ ಜಸ್ಸಿ ಅವರು ನೌಕರರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ಅನಿವಾರ್ಯವಾಗಿ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೀಗ ಹಲವು ಕಂಪನಿಗಳು ಮತ್ತೆ ಕಚೇರಿಯಿಂದಲೇ ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚನೆ ನೀಡುತ್ತಿವೆ. ಸ್ಟಾರ್‌ಬಕ್ಸ್ ಕಂಪನಿ ಸಹ ಈಗಾಗಲೇ ವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ಮಾಡುವಂತೆ ನೌಕರರಿಗೆ ತಿಳಿಸಿದೆ. ಡಿಸ್ನಿ ಕಂಪನಿಯು ಮಾರ್ಚ್‌ನಿಂದ ಜಾರಿಗೆ ಬರುವಂತೆ ವಾರದಲ್ಲಿ ನಾಲ್ಕು ದಿನ ಕಚೇರಿಯಿಂದ ಕೆಲಸ ಮಾಡುವಂತೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.