ಬೆಂಗಳೂರು: ದೇಶದ ಇ ಕಾಮರ್ಸ್ ವೇದಿಕೆಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಮೆಜಾನ್, ಗಣರಾಜ್ಯೋತ್ಸವ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.
ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2023 ಈಗಾಗಲೇ ಆರಂಭವಾಗಿದ್ದು, ಜನವರಿ 20ರವರೆಗೆ ನಡೆಯಲಿದೆ.
ವಿಶೇಷ ಸೇಲ್ ಅವಧಿಯಲ್ಲಿ ಎಲೆಕ್ಟ್ರಾನಿಕ್ಸ್, ಗ್ಯಾಜೆಟ್, ಗೃಹಬಳಕೆಯ ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಕೊಡುಗೆಗಳ ಪ್ರಯೋಜನ ದೊರೆಯಲಿದೆ ಎಂದು ಕಂಪನಿ ಹೇಳಿದೆ.
ಅಲ್ಲದೆ, ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಹೆಚ್ಚುವರಿ ಶೇ 10 ಅಂದರೆ, ₹2,500 ವರೆಗೆ ಗರಿಷ್ಠ ಡಿಸ್ಕೌಂಟ್ ಪಡೆಯಬಹುದಾಗಿದೆ ಎಂದು ಅಮೆಜಾನ್ ತಿಳಿಸಿದೆ.
ವಿವಿಧ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್, ಅಕ್ಸೆಸ್ಸರಿ, ಸೌಂದರ್ಯವರ್ಧಕ ಉಪಕರಣಗಳ ಖರೀದಿಗೆ ಅಮೆಜಾನ್ ದರ ಕಡಿತ ಘೋಷಿಸಿದೆ. ಅಲ್ಲದೆ, ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಕೊಡುಗೆಗಳ ಪ್ರಯೋಜನ ದೊರೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.