ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಬಿಕ್ಕಟ್ಟು: 18 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಅಮೆಜಾನ್

Last Updated 5 ಜನವರಿ 2023, 4:41 IST
ಅಕ್ಷರ ಗಾತ್ರ

ವಾಷಿಂಗ್ಟನ್: 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಇ–ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ ಗುರುವಾರ ಹೇಳಿದೆ.

2022ರ ನವೆಂಬರ್‌ನಲ್ಲಿ 10,000 ಉದ್ಯೋಗಿಗಳನ್ನು ಅಷ್ಟೆ ತೆಗೆಯಲಾಗುತ್ತದೆ ಎಂದು ಕಂಪನಿ ಹೇಳಿತ್ತು. ಆದರೀಗ ಹಿಂದೆ ತಿಳಿಸಿದ್ದಕ್ಕಿಂತ ಹೆಚ್ಚು ನೌಕರರನ್ನು ವಜಾಗೊಳಿಸಲು ಚಿಂತಿಸಿದೆ.

ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಉದ್ಯೋಗ ಕಡಿತಕ್ಕೆ ರಿಟೇಲ್ ಮಾರಾಟ, ಮಾನವ ಸಂಪನ್ಮೂಲ ಹಾಗೂ ಉಪಕರಣಗಳ ವಿಭಾಗವನ್ನು ಕೇಂದ್ರೀಕರಿಸಲಿದೆ ಎಂದು ಅಮೆಜಾನ್‌ ಸಿಇಒ ಆ್ಯಂಡಿ ಜೆಸ್ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್‌ಪಿ, ಮೆಟಾ, ಮತ್ತು ಟ್ವಿಟರ್‌ನಂತಹ ಕಂಪನಿಗಳು ಕೂಡ ವೆಚ್ಚ ಕಡಿತದ ಮೊರೆ ಹೋಗಿವೆ.

ಫೇಸ್‌ಬುಕ್‌ ಮಾಲೀಕತ್ವದ ಮೆಟಾ ಕಂಪನಿಯು 11 ಸಾವಿರ ನೌಕರರನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿತ್ತು. ಟ್ವಿಟರ್ ಕಂಪನಿಯು ಉದ್ಯಮಿ ಎಲಾನ್‌ ಮಸ್ಕ್ ಅವರ ತೆಕ್ಕೆಗೆ ಸೇರಿದ ನಂತರದಲ್ಲಿ ಶೇಕಡ 50ರಷ್ಟು ನೌಕರರನ್ನು ಕೆಲಸದಿಂದ ತೆಗೆದುಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT