ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಸಂಘ: ಸುಧಾರಣೆಗೆ ಶಾ ಕರೆ

Last Updated 9 ಆಗಸ್ಟ್ 2022, 21:25 IST
ಅಕ್ಷರ ಗಾತ್ರ

ನವದೆಹಲಿ: ಸಹಕಾರ ಸಂಘಗಳಲ್ಲಿ ಚುನಾವಣಾ ಪ್ರಕ್ರಿಯೆಯು ಹೆಚ್ಚು ಪಾರದರ್ಶಕವಾಗಬೇಕು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ‘ಒಬ್ಬನೇ ವ್ಯಕ್ತಿ ಪ್ರತಿ ವರ್ಷವೂ ಚುನಾಯಿತನಾಗುವ ವ್ಯವಸ್ಥೆ ಸರಿಯಲ್ಲ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಸಹಕಾರ ಕ್ಷೇತ್ರದಲ್ಲಿ ಬಹಳ ವೇಗವಾಗಿ ಬದಲಾವಣೆ ತರುವ ಅಗತ್ಯವಿದೆ. ನಾವು ಬದಲಾಗದಿದ್ದರೆ ಜನರೇ ನಮ್ಮನ್ನು ಬದಲಾಯಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ಚುನಾವಣಾ ಪ್ರಕ್ರಿಯೆಯು ಪಾರದರ್ಶಕ ಆಗಬೇಕು. ನಾವು ಬದಲಾವಣೆ ತರಲು ಬಯಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ. ಸಹಕಾರ ಸಂಘಗಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮಾದರಿಯಲ್ಲಿ ವ್ಯವಸ್ಥೆಯೊಂದನ್ನು ರೂಪಿಸಲಾಗುವುದು ಎಂದಿದ್ದಾರೆ.

ಶಾ ಅವರು ತಾವು ಕೂಡ 25 ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವೊಂದಕ್ಕೆ ಅಧ್ಯಕ್ಷರಾಗಿದ್ದು ಅಲ್ಲಿ ಈ ವರ್ಷ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಹಕಾರ ಕ್ಷೇತ್ರದಲ್ಲಿನ ನೇಮಕಾತಿ ವ್ಯವಸ್ಥೆಯಲ್ಲಿ ಕೂಡ ಬದಲಾವಣೆ ತರಬೇಕಾದ ಅಗತ್ಯ ಇದೆ. ಸಚಿವಾಲಯವು ಅದಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT