ಶುಕ್ರವಾರ, ಆಗಸ್ಟ್ 12, 2022
27 °C

ಸುಲಲಿತ ವಹಿವಾಟು: ಮೊದಲ ಸ್ಥಾನ ಉಳಿಸಿಕೊಂಡ ಆಂಧ್ರಪ್ರದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸುಲಲಿತ ಉದ್ದಿಮೆ ವಹಿವಾಟಿನ ವಾರ್ಷಿಕ ಶ್ರೇಯಾಂಕದಲ್ಲಿ ಆಂಧ್ರಪ್ರದೇಶವು 2019ರಲ್ಲಿಯೂ ಮೊದಲ ಸ್ಥಾನ ಕಾಯ್ದುಕೊಂಡಿದೆ. ಉತ್ತರ ಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.

ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆಯು (ಡಿಐಪಿಪಿ) ಸಿದ್ಧಪಡಿಸಿರುವ ವರದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಬಿಡುಗಡೆ ಮಾಡಿದರು.

‘ಡಿಐಪಿಪಿ’ಯು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಹಿವಾಟು ಸುಧಾರಣಾ ಕ್ರಿಯಾ ಯೋಜನೆಯಲ್ಲಿ (ಬಿಆರ್‌ಎಪಿ) ಸೂಚಿಸಲಾಗಿದ್ದ ವಾರ್ಷಿಕ ಸುಧಾರಣಾ ಕ್ರಮಗಳನ್ನು ಪರಿಶೀಲನೆಗೆ ಒಳಪಡಿಸಿತ್ತು. ನಿರ್ಮಾಣ ಯೋಜನೆಗಳಿಗೆ ನೀಡಿರುವ ಅನುಮತಿ, ಕಾರ್ಮಿಕರ ನಿಯಂತ್ರಣ ಕಾಯ್ದೆ, ಪರಿಸರ ಪರವಾನಗಿ, ಭೂಮಿ ಲಭ್ಯತೆ ಹಾಗೂ ಏಕಗವಾಕ್ಷಿ ವ್ಯವಸ್ಥೆಯನ್ನು ಪರಿಗಣಿಸಿ ಈ ಸ್ಥಾನಮಾನ ನೀಡಲಾಗಿದೆ.

2018ರಲ್ಲಿ ಬಿಡುಗಡೆ ಮಾಡಿದ್ದ ವರದಿಯಲ್ಲಿ ಆಂಧ್ರಪ್ರದೇಶ ಮೊದಲ ಸ್ಥಾನದಲ್ಲಿತ್ತು. ತೆಲಂಗಾಣ ಮತ್ತು ಹರಿಯಾಣ ಎರಡು ಮತ್ತು ಮೂರನೆ ಸ್ಥಾನದಲ್ಲಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು