ಗುರುವಾರ , ಅಕ್ಟೋಬರ್ 29, 2020
21 °C

ಚಾಲಿ ಅಡಿಕೆ ಬೆಲೆ ಕೆ.ಜಿ.ಗೆ ₹ 300

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನೇಪಾಳ ಹಾಗೂ ಬಾಂಗ್ಲಾ ದೇಶಗಳ ಗಡಿಗಳನ್ನು ಬಂದ್ ಮಾಡಿರುವ ಪರಿಣಾಮ ಉತ್ತರ ಭಾರತದಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಿದ್ದು, ಇದರಿಂದ ಚಾಲಿ ಅಡಿಕೆ ಬೆಲೆ ಪ್ರತಿ ಕೆ.ಜಿ.ಗೆ ₹ 300ಕ್ಕೆ ಏರಿದೆ. ಪ್ರತಿ ಕೆ.ಜಿ.ಗೆ ₹ 50 ರಷ್ಟು ಹೆಚ್ಚಳವಾಗಿದ್ದು, ಕಳೆದ ಮೂರು ವರ್ಷಗಳಲ್ಲಿಯೇ ಅತ್ಯಧಿಕ ಬೆಲೆ ಬಂದಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಬೆಲೆ ₹ 250ರಷ್ಟಿತ್ತು. ಉತ್ತರ ಭಾರತದ ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ಪ್ರಮುಖ ಮಾರುಕಟ್ಟೆಗೆ ಈ ಅಡಿಕೆಯನ್ನು ಮಾರಾಟ ಮಾಡಲಾಗುತ್ತಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್. ಸತೀಶ್ಚಂದ್ರ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು