ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ದರ ಇಳಿಕೆ ಮಾಡುವ ಕುರಿತು ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ– ಪುರಿ

ಕಂಪನಿಗಳು ದರ ಇಳಿಕೆಯನ್ನು ಪರಿಶೀಲಿಸಬಹುದು: ಪುರಿ
Published 10 ಜೂನ್ 2023, 15:53 IST
Last Updated 10 ಜೂನ್ 2023, 15:53 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ ಮಾಡುವ ಕುರಿತು ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿಯೇ ಇದ್ದರೆ ತೈಲ ಮಾರಾಟ ಕಂಪನಿಗಳು ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕಡಿಮೆ ಮಾಡುವ ಕುರಿತು ಪರಿಶೀಲನೆ ನಡೆಸುವ ಸ್ಥಿತಿಗೆ ಬರಲಿವೆ’ ಎಂದೂ ಅವರು ಹೇಳಿದ್ದಾರೆ.

‘ಕಳೆದ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಆರ್ಥಿಕ ಸಾಧನೆ ಉತ್ತಮವಾಗಿದೆ. ಕಂಪನಿಗಳು ನಷ್ಟದಿಂದ ಒಂದಿಷ್ಟು ಚೇತರಿಸಿಕೊಂಡಿವೆ. ಹೀಗಾಗಿ ಏನು ಮಾಡಬಹುದು ಎನ್ನುವುದನ್ನು ಮುಂದಿನ ದಿನಗಳಲ್ಲಿ ನೋಡೋಣ’ ಎಂದು ಅವರು ತಿಳಿಸಿದ್ದಾರೆ.

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 9 ವರ್ಷಗಳ ಆಡಳಿತದ ಕುರಿತು ಇಲ್ಲಿನ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅವರು ಮಾತನಾಡಿದರು. ‌2022ರ ಏಪ್ರಿಲ್‌ನಿಂದ ಇಂಧನ ದರದಲ್ಲಿ ಯಾವುದೇ ಏರಿಕೆ ಆಗದಂತೆ ಸರ್ಕಾರವು ನೋಡಿಕೊಂಡಿದೆ. ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರವು ಕ್ರಮ ವಹಿಸಿದೆ’ ಎಂದಿದ್ದಾರೆ.

‘9 ವರ್ಷಗಳ ಆಡಳಿತದಲ್ಲಿ ಜನರಿಗೆ ನೆರವಾಗಲು ಹಲವು ಕಲ್ಯಾಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ಹೋಲಿಸಿದರೆ ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ವ್ಯಾಟ್‌ ಕಡಿಮೆ ಮಾಡದೇ ಗರಿಷ್ಠ ದರಕ್ಕೆ ಪೆಟ್ರೋಲ್‌ ಮತ್ತು ಡೀಸೆಲ್ ಮಾರಾಟ ಮಾಡುತ್ತಿವೆ. ಹೀಗಿದ್ದರೂ ಆ ರಾಜ್ಯಗಳೇ ಪೆಟ್ರೋಲಿಯಂ ದರಗಳ ಬಗ್ಗೆ ಹೆಚ್ಚು ದನಿ ಎತ್ತುತ್ತಿವೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT