ಉಡುಪಿ: ಭಾರತೀಯ ವಾಣಿಜ್ಯೋದ್ಯಮ ಮಹಾಸಂಘವು (ಅಸೋಚಾಂ) 2026–27 ನೇ ಸಾಲಿಗೆ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಿಶೋರ್ ಆಳ್ವ ಅವರನ್ನು ನೇಮಕ ಮಾಡಿದೆ.

ಕಿಶೋರ್ ಆಳ್ವ ಅವರು ಬಹುರಾಷ್ಟ್ರೀಯ ಕಂಪನಿಗಳು, ಇಂಧನ, ಮೂಲಸೌಕರ್ಯ ಮತ್ತು ಅಂತರರಾಷ್ಟ್ರೀಯ ವ್ಯಾಪಾರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೂರು ದಶಕಗಳಿಗಿಂತ ಹೆಚ್ಚು ದುಡಿದ ಅನುಭವ ಹೊಂದಿದ್ದಾರೆ. ಆಳ್ವ ಅವರು ಪ್ರಸ್ತುತ ಕರ್ನಾಟಕದಲ್ಲಿ ಅದಾನಿ ಗ್ರೂಪ್ನ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಸೋಚಾಂ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಿಶೋರ್ ಆಳ್ವ ಅವರು ಉದ್ಯಮ ವೃದ್ಧಿಯನ್ನು ಉತ್ತೇಜಿಸುವ, ವ್ಯವಹಾರ ಸುಲಭತೆಯನ್ನು ಹೆಚ್ಚಿಸುವ ಹಾಗೂ ಉದ್ಯಮ ಮತ್ತು ಸರ್ಕಾರದ ನಡುವಿನ ಸಹಕಾರವನ್ನು ಬಲಪಡಿಸುವ ಉದ್ದೇಶದ ಪ್ರಮುಖ ಉಪಕ್ರಮಗಳಿಗೆ ನೇತೃತ್ವ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-28-993719025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.