ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಇಂಧನ ದರ ಶೇ 2.2ರಷ್ಟು ಇಳಿಕೆ

Last Updated 16 ಜುಲೈ 2022, 10:44 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಿಮಾನ ಇಂಧನ (ಎಟಿಎಫ್‌) ದರವನ್ನು ಶನಿವಾರ ಶೇ 2.2ರಷ್ಟು ಇಳಿಕೆ ಮಾಡಿವೆ.

ಈ ಪರಿಷ್ಕರಣೆಯಿಂದಾಗಿ ದೆಹಲಿಯಲ್ಲಿ ವಿಮಾನ ಇಂಧನ ದರ ಪ್ರತಿ ಕಿಲೋ ಲೀಟರಿಗೆ ₹ 3,084.94ರಷ್ಟು ಕಡಿಮೆ ಆಗಿದ್ದು, ₹ 1.38 ಲಕ್ಷಕ್ಕೆ ಇಳಿಕೆ ಆಗಿದೆ. (ಒಂದು ಕಿಲೋ ಲೀಟರ್‌ ಎಂದರೆ ಒಂದು ಸಾವಿರ ಲೀಟರ್). ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ ಆಗಿರುವುದರಿಂದ ಕಂಪನಿಗಳು ಎಟಿಎಫ್‌ ದರವನ್ನು ಕಡಿಮೆ ಮಾಡಿವೆ.

ಈ ವರ್ಷದಲ್ಲಿ ದರ ಇಳಿಕೆ ಆಗುತ್ತಿರುವುದು ಇದು ಎರಡನೇ ಬಾರಿ. ಈವರೆಗೆ ಒಟ್ಟಾರೆ 11 ಬಾರಿ ದರವನ್ನು ಹೆಚ್ಚಿಸಲಾಗಿದೆ. ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT