ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಟಿಎಫ್‌ ಬೆಲೆ ಏರಿಕೆ, ಎಲ್‌ಪಿಜಿ ದರ ಇಳಿಕೆ

Last Updated 1 ನವೆಂಬರ್ 2022, 16:12 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿಮಾನ ಇಂಧನ (ಎಟಿಎಫ್‌) ದರವನ್ನು ಮಂಗಳವಾರ ಶೇಕಡ 4.2ರಷ್ಟು ಹೆಚ್ಚಿಸಲಾಗಿದೆ. ಇದೇ ವೇಳೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 115.5ರಷ್ಟು ಇಳಿಕೆ ಮಾಡಲಾಗಿದೆ.

ಎಟಿಎಫ್‌ ದರವು ದೆಹಲಿಯಲ್ಲಿ ಪ್ರತಿ ಕಿಲೋ ಲೀಟರ್‌ಗೆ ₹ 4,842ರಷ್ಟು ಹೆಚ್ಚಳವಾಗಿದ್ದು, ₹ 1.20 ಲಕ್ಷಕ್ಕೆ ತಲುಪಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ದರವು ಮಂಗಳವಾರದ ಇಳಿಕೆಯ ನಂತರದಲ್ಲಿ ಪ್ರತಿ ಸಿಲಿಂಡರ್‌ಗೆ ₹ 1,744ಕ್ಕೆ ತಲುಪಿದೆ.

ಜೂನ್‌ ನಂತರದಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ದರ ಇಳಿಕೆಯಾಗುತ್ತಿರುವುದು ಇದು ಏಳನೆಯ ಬಾರಿ. ಮನೆಗಳಲ್ಲಿ ಬಳಸುವ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಬದಲಾವಣೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT