ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಔಡಿ ಆರ್‌ಎಸ್‌ 5 ಸ್ಪೋರ್ಟ್‌ಬ್ಯಾಕ್ ಮಾರುಕಟ್ಟೆಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜರ್ಮನಿಯ ಐಷಾರಾಮಿ ಕಾರು ತಯಾರಿಕಾ ಕಂಪನಿ ಔಡಿ ಆರ್‌ಎಸ್‌ 5 ಸ್ಪೋರ್ಟ್‌ಬ್ಯಾಕ್‌ ಮಾದರಿ ಕಾರನ್ನು ಭಾರತದ ಮಾರುಕಟ್ಟೆಗೆ ಸೋಮವಾರ ಬಿಡುಗಡೆ ಮಾಡಿದೆ. ಇದರ ಎಕ್ಸ್‌ ಷೋರೂಂ ಬೆಲೆ ₹ 1.04 ಕೋಟಿ.

ಈ ಕಾರಿನಲ್ಲಿ 2.9 ಲೀಟರ್‌ನ ವಿ6 ಟ್ವಿನ್–ಟರ್ಬೊ ಪೆಟ್ರೋಲ್‌ ಎಂಜಿನ್‌ ಅಳವಡಿಸಲಾಗಿದೆ. ಇದು 450 ಎಚ್‌ಪಿ ಶಕ್ತಿಯನ್ನು ಉತ್ಪಾದಿಸುತ್ತದೆ ಎಂದು ಕಂಪನಿ ತಿಳಿಸಿದೆ.

ಈ ಕಾರು ಕೇವಲ 3.9 ಸೆಕೆಂಡುಗಳಲ್ಲಿ ಶೂನ್ಯದಿಂದ ಪ್ರತಿ ಗಂಟೆಗೆ 100 ಕಿ.ಮೀ. ವೇಗದ ಮಟ್ಟ ತಲುಪುತ್ತದೆ. ಇದು ಗಂಟೆಗೆ ಗರಿಷ್ಠ 250 ಕಿ.ಮೀ. ವೇಗದಲ್ಲಿ ಚಲಿಸಬಲ್ಲದು ಎಂದು ಕಂಪನಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು