ಬುಧವಾರ, ಆಗಸ್ಟ್ 4, 2021
22 °C

ವಾಹನ ವಲಯದ ವರಮಾನ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಾಹನ ವಲಯದ ವರಮಾನವು ಜನವರಿ–ಮಾರ್ಚ್‌ ಅವಧಿಯಲ್ಲಿ ಶೇ 15ರಷ್ಟು ಇಳಿಕೆ ಕಂಡಿದೆ ಎಂದು ಇಂಡಿಯಾ ರೇಟಿಂಗ್ಸ್‌ ಮತ್ತು ರಿಸರ್ಚ್‌ ಹೇಳಿದೆ.

ವಾಹನೋದ್ಯಮದ 14 ವಲಯಗಳ ಒಟ್ಟಾರೆ 417 ಕಂಪನಿಗಳ ಮಾಹಿತಿ ಕಲೆಹಾಕಿದ್ದು, ಅದರಲ್ಲಿ 190 ಕಂಪನಿಗಳು 2020ರ ಜೂನ್‌ 27ರ ಅಂತ್ಯಕ್ಕೆ ನಾಲ್ಕನೇ ತ್ರೈಮಾಸಿಕದ ವರದಿ ಸಲ್ಲಿಸಿವೆ. ಇದರ ಆಧಾರದ ಮೇಲೆ ಮಾಹಿತಿ ನೀಡಿದೆ.

ಕೋವಿಡ್‌ ಬಿಕ್ಕಟ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ನೋಂದಾಯಿತ ಕಂಪನಿಗಳಿಗೆ ತಮ್ಮ ಆರ್ಥಿಕ ಸಾಧನೆಯ ವರದಿ ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು