ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಚಾಲಿತ ವಾಹನ: 2022ರ ಡಿಸೆಂಬರ್‌ಗೆ ವೇಗದ ಚಾರ್ಜರ್‌: ಮಹೇಂದ್ರನಾಥ್

ಬೃಹತ್‌ ಉದ್ದಿಮೆಗಳ ಕೇಂದ್ರ ಸಚಿವ ಮಹೇಂದ್ರನಾಥ್‌ ಪಾಂಡೆ
Last Updated 4 ಡಿಸೆಂಬರ್ 2021, 16:22 IST
ಅಕ್ಷರ ಗಾತ್ರ

ಮುಂಬೈ: ಭಾರತೀಯ ಮೋಟಾರು ವಾಹನ ಸಂಶೋಧನಾ ಸಂಸ್ಥೆಯು (ಎಆರ್‌ಎಐ) ವಿದ್ಯುತ್‌ ಚಾಲಿತ ವಾಹನಗಳಿಗಾಗಿ ವೇಗದ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದ್ದು, 2022ರ ಡಿಸೆಂಬರ್ ವೇಳೆಗೆ ಬಳಕೆಗೆ ಲಭ್ಯವಾಗುವ ನಿರೀಕ್ಷೆ ಮಾಡಲಾಗಿದೆ ಎಂದು ಬೃಹತ್‌ ಉದ್ದಿಮೆಗಳ ಕೇಂದ್ರ ಸಚಿವ ಮಹೇಂದ್ರನಾಥ್ ಪಾಂಡೆ ಶನಿವಾರ ತಿಳಿಸಿದ್ದಾರೆ.

ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸಲು ಆಯೋಜಿಸಿದ್ದ ಸಮ್ಮೇಳನವೊಂದರಲ್ಲಿ ಮಾತನಾಡಿದ ಅವರು, ವಿದ್ಯುತ್ ಚಾಲಿತ ವಾಹನದ ಬ್ಯಾಟರಿ ಚಾರ್ಜ್‌ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಹೀಗಾಗಿ ವೇಗವಾಗಿ ಚಾರ್ಜ್‌ ಆಗುವಂತಹ ಚಾರ್ಜರ್‌ ಅನ್ನು ಸಂಸ್ಥೆಯು ಅಭಿವೃದ್ಧಿಪಡಿಸುತ್ತಿದೆ. ಈಗಾಗಲೇ ಅದರ ಮಾದರಿಯೊಂದನ್ನು ಅದು ಸಿದ್ಧಪಡಿಸಿದೆ. 2022ರ ಅಕ್ಟೋಬರ್‌ ಒಳಗೆ ಈ ಯೋಜನೆಯು ಪೂರ್ಣಗೊಳ್ಳಲಿದೆ. ಡಿಸೆಂಬರ್‌ ವೇಳೆಗೆ ಬಳಕೆಗೆ ಲಭ್ಯವಾಗಲಿದೆ. ಹೀಗಾದಲ್ಲಿ ಬ್ಯಾಟರಿಯಿಂದ ಚಾಲತ ವಾಹನಗಳಿಗೆ ಬೇಡಿಕೆ ಹೆಚ್ಚಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವೇಗದ ಚಾರ್ಜರ್‌ ಅಭಿವೃದ್ಧಿಪಡಿಸುವ ಯೋಜನೆಯು ಪೂರ್ಣಗೊಂಡ ನಂತರ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ಇ–ವಾಹನಗಳನ್ನು ಚಾರ್ಜ್‌ ಮಾಡಲು ನಿರ್ದಿಷ್ಟವಾಗಿ ಎಷ್ಟು ಸಮಯ ಬೇಕಾಗುತ್ತದೆ ಎನ್ನುವುದು ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ದೇಶದಾದ್ಯಂತ 22 ಸಾವಿರ ಪೆಟ್ರೋಲ್‌ ಪಂಪ್‌ಗಳಲ್ಲಿ ಚಾರ್ಜಿಂಗ್‌ ಕೇಂದ್ರಗಳನ್ನು ಅಳವಡಿಸುವ ಕುರಿತಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಎಂಟು ರಾಜ್ಯಗಳ ಸಾರಿಗೆ ಸಚಿವರು, 19 ರಾಜ್ಯಗಳ ಉನ್ನತಮಟ್ಟದ ಅಧಿಕಾರಿಗಳು ಹಾಗೂ ಉದ್ಯಮ ವಲಯದ ಪ್ರಮುಖರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು ಮತ್ತು ಹೂಡಿಕೆ ಆಕರ್ಷಿಸಲು ಇರುವ ಮಾರ್ಗಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT