ಬೆಂಗಳೂರು: ಜೈವಿಕ ತಂತ್ರಜ್ಞಾನ ಕಂಪನಿ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರು 2019ರ ಸಾಲಿನ ಪ್ರತಿಷ್ಠಿತ ಅರ್ನ್ಸ್ಟ್ ಆ್ಯಂಡ್ ಯಂಗ್ (ಇವೈ) ವರ್ಷದ ಉದ್ಯಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಯ್ಕೆ ಸಮಿತಿಯು ಅಂತಿಮಗೊಳಿಸಿದ್ದ 17 ಮಂದಿ ಉದ್ಯಮಿಗಳಲ್ಲಿ ಶಾ ಅವರಿಗೆ ಪ್ರಶಸ್ತಿ ಲಭಿಸಿದೆ. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಭಾರತದ ಜೈವಿಕ ತಂತ್ರಜ್ಞಾನ ಉದ್ಯಮಕ್ಕೆ ಪರ್ಯಾಯ ಹೆಸರಾದ ಕಿರಣ್ ಮಜುಂದಾರ್ ಶಾ ವರು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿದ್ದಾರೆ. ಕೈಗೆಟುಕುವ, ಜೀವ ರಕ್ಷಕ ಔಷಧಗಳ ಸಂಶೋಧನೆಗಳಿಗೆ ಅವರು ನೀಡುತ್ತಿರುವ ಪ್ರೋತ್ಸಾಹ ಪರಿಗಣಿಸಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ. ಗೋದ್ರೆಜ್ ಸಮೂಹದ ಆದಿ ಗೋದ್ರೆಜ್ ಅವರ ಜೀವಮಾನದ ಸಾಧನೆ ಪರಿಗಣಿಸಿ ವಿಶೇಷ ಪ್ರಶಸ್ತಿ ನೀಡಲಾಗಿದೆ.

ಮಾಂಟೆಕಾರ್ಲೊದಲ್ಲಿ ಜೂನ್‌ನಲ್ಲಿ ನಡೆಯಲಿರುವ ಇವೈ ಜಾಗತಿಕ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.