ಶುಕ್ರವಾರ, ಜನವರಿ 22, 2021
27 °C

ಸಶಿಮಿ ಫುಡ್ಸ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೀನು ಮಾರಾಟ ಮತ್ತು ರಫ್ತು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಸಶಿಮಿ ಫುಡ್ಸ್‌ ಪ್ರೈವೇಟ್ ಲಿಮಿಟೆಡ್‌ ಕಂಪನಿಯು ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಸಂಸ್ಥೆ ನೀಡುವ ‘ಅತ್ಯುತ್ತಮ ಮೀನುಗಾರಿಕಾ ಉದ್ಯಮ’ ಪುರಸ್ಕಾರ ಪಡೆದುಕೊಂಡಿದೆ.

ವಿಶ್ವ ಮೀನುಗಾರಿಕಾ ದಿನದ ಅಂಗವಾಗಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕಾ ಖಾತೆ ರಾಜ್ಯ ಸಚಿವ ಪ್ರತಾಪ್‌ಚಂದ್ರ ಸಾರಂಗಿ ಅವರು ಸಶಿಮಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೇದಾರ್‌ನಾಥ್‌ ರೆಡ್ಡಿ ಅವರಿಗೆ ಪ್ರಶಸ್ತಿ ನೀಡಿದರು.

‘ಸಂಸ್ಥೆಯಿಂದ ಮೀನುಗಾರರಿಗೆ ಆಗಿರುವ ಸಹಾಯ, ಕನಿಷ್ಠ ಬೆಂಬಲ ಬೆಲೆ ನಿಯಮಗಳ ಅನ್ವಯ ಮೀನು ಖರೀದಿ, ಮೀನುಗಾರರಿಗೆ ತರಬೇತಿ, ಮೂಲ ಸೌಕರ್ಯ ಅಭಿವೃದ್ಧಿ, ಮೌಲ್ಯವರ್ಧನೆ, ಹಣಕಾಸು ನೆರವು ನೀಡಿರುವುದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.