ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಕ್ಸಿಸ್‌ ಬ್ಯಾಂಕ್‌ಗೆ ₹7,129 ಕೋಟಿ ಲಾಭ

Published 24 ಏಪ್ರಿಲ್ 2024, 15:50 IST
Last Updated 24 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

‌ಮುಂಬೈ: ಖಾಸಗಿ ವಲಯದ ಎಕ್ಸಿಸ್‌ ಬ್ಯಾಂಕ್‌ 2023–24ನೇ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಒಟ್ಟು ₹7,129 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹5,728 ಕೋಟಿ ಲಾಭ ಗಳಿಸಿತ್ತು ಎಂದು ಬ್ಯಾಂಕ್‌ ಷೇರುಪೇಟೆಗೆ ತಿಳಿಸಿದೆ.

ವರಮಾನವು ₹28,758 ಕೋಟಿಯಿಂದ ₹35,990 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್‌ನ ಬಡ್ಡಿ ವರಮಾನವು ಶೇ 11ರಷ್ಟು ಹೆಚ್ಚಳವಾಗಿ, ₹13,089 ಕೋಟಿಗೆ ಮುಟ್ಟಿದೆ. 2023–24ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹24,861 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 160ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಬ್ಯಾಂಕ್‌ನ ವಸೂಲಾಗದ ಸಾಲದ ಪ್ರಮಾಣವು (ಎನ್‌ಪಿಎ) ಶೇ 2.02ರಿಂದ ಶೇ 1.43ಕ್ಕೆ ಇಳಿಕೆಯಾಗಿದೆ. ಮಾರ್ಚ್‌ ತ್ರೈಮಾಸಿಕದಲ್ಲಿ ಹೊಸದಾಗಿ 12.40 ಲಕ್ಷ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT