ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜಾಜ್‌ ಫಿನ್‌ಸರ್ವ್‌ ಲಾಭ ಶೇ 20ರಷ್ಟು ಹೆಚ್ಚಳ

Published 26 ಏಪ್ರಿಲ್ 2024, 13:20 IST
Last Updated 26 ಏಪ್ರಿಲ್ 2024, 13:20 IST
ಅಕ್ಷರ ಗಾತ್ರ

ನವದೆಹಲಿ: ಬಜಾಜ್‌ ಫಿನ್‌ಸರ್ವ್ ಲಿಮಿಟೆಡ್‌ನ (ಬಿಎಫ್‌ಎಲ್‌) ಲಾಭವು 2023–24ರ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 20ರಷ್ಟು ಹೆಚ್ಚಳವಾಗಿದ್ದು, ₹2,119 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹1,769 ಕೋಟಿ ಲಾಭ ಗಳಿಸಿತ್ತು. ವರಮಾನವು ₹23,625 ಕೋಟಿಯಿಂದ ₹32,042 ಕೋಟಿಗೆ ಹೆಚ್ಚಳವಾಗಿದೆ ಎಂದು ಕಂಪನಿ ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.

2023–24ರ ಪೂರ್ಣ ಹಣಕಾಸು ವರ್ಷದಲ್ಲಿ ಕಂಪನಿಯು ₹8,148 ಕೋಟಿ ಲಾಭ ಗಳಿಸಿದೆ. ಇದು ಹಿಂದಿನ ಇದೇ ಅವಧಿಗಿಂತ ಶೇ 27ರಷ್ಟು ಹೆಚ್ಚಳವಾಗಿದೆ. ವರಮಾನವು ₹82,072 ಕೋಟಿಯಿಂದ ₹1.10 ಲಕ್ಷ ಕೋಟಿಗೆ ಏರಿಕೆಯಾಗಿದೆ.

₹1 ಮುಖಬೆಲೆಯ ಪ್ರತಿ ಷೇರಿಗೆ ₹1 ಲಾಭಾಂಶ ನೀಡಲು ಮಂಡಳಿಯ ನಿರ್ದೇಶಕರು ಶಿಫಾರಸು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT