ಬುಧವಾರ, ಜನವರಿ 27, 2021
16 °C

ಬಜಾಜ್ ಮಾರುಕಟ್ಟೆ ಮೌಲ್ಯ ₹ 1 ಲಕ್ಷ ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಜಾಜ್ ಆಟೊ ಲಿಮಿಟೆಡ್ ಕಂಪನಿಯು ₹ 1 ಲಕ್ಷ ಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ, ದ್ವಿಚಕ್ರ ವಾಹನ ತಯಾರಿಕಾ ಕ್ಷೇತ್ರದ ವಿಶ್ವದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜನವರಿ 1ರಂದು ಬಜಾಜ್‌ ಆಟೊ ಲಿಮಿಟೆಡ್‌ನ ಷೇರಿನ ಬೆಲೆಯು ₹ 3,479ಕ್ಕೆ ತಲುಪಿತು. ಆಗ ಕಂಪನಿಯ ಮಾರುಕಟ್ಟೆ ಬಂಡವಾಳವು ₹ 1 ಲಕ್ಷ ಕೋಟಿಯನ್ನು ದಾಟಿತು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

‘ಇಷ್ಟು ದೊಡ್ಡ ಪ್ರಮಾಣದ ಮಾರುಕಟ್ಟೆ ಬಂಡವಾಳವನ್ನು ವಿಶ್ವದ ಯಾವುದೇ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಹೊಂದಿಲ್ಲ ಎಂಬುದು ತಜ್ಞರ ಮಾತು’ ಎಂದು ಕಂಪನಿ ಹೇಳಿದೆ. ‘ಇದು ನಮ್ಮ ಗ್ರಾಹಕರಿಗೆ ಅತ್ಯುತ್ತಮ ರೀತಿಯಲ್ಲಿ ಸೇವೆ ಒದಗಿಸಲು, ಅವರ ಖುಷಿಯನ್ನು ಹೆಚ್ಚಿಸಲು ನಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಬಜಾಜ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು