ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಡಿಎಚ್‌, ಎವರೆಸ್ಟ್‌ ಪದಾರ್ಥಗಳಿಗೆ ನಿಷೇಧ: ವರದಿ ಪರಿಶೀಲಿಸಲು ಕೇಂದ್ರ ನಿರ್ಧಾರ

Published 23 ಏಪ್ರಿಲ್ 2024, 12:54 IST
Last Updated 23 ಏಪ್ರಿಲ್ 2024, 12:54 IST
ಅಕ್ಷರ ಗಾತ್ರ

ನವದೆಹಲಿ: ಹಾಂಗ್‌ಕಾಂಗ್‌ ಮತ್ತು ಸಿಂಗ‍ಪುರದಲ್ಲಿ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿರುವುದಕ್ಕೆ ಸಂಬಂಧಿಸಿದಂತೆ ಅಲ್ಲಿನ ಆಹಾರ ಸುರಕ್ಷತೆ ಕೇಂದ್ರಗಳು ಸಿದ್ಧಪಡಿಸಿರುವ ವರದಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನಿಷೇಧಕ್ಕೆ ಸಂಬಂಧಿಸಿದ ತಾಂತ್ರಿಕ ವಿವರ ಹಾಗೂ ವಿಶ್ಲೇಷಣಾತ್ಮಕ ವರದಿ ರವಾನಿಸುವಂತೆ ಎರಡು ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಿಗೆ ಕೇಂದ್ರ ವಾಣಿಜ್ಯ ಸಚಿವಾಲಯವು ನಿರ್ದೇಶನ ನೀಡಿದೆ.

ಎಂಡಿಎಚ್‌ನ ಮೂರು ಹಾಗೂ ಎವರೆಸ್ಟ್‌ನ ಒಂದು ಪದಾರ್ಥದಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಎಂಬ ಕೀಟನಾಶಕ ಅಂಶ ಪತ್ತೆಯಾಗಿದೆ ಎಂಬ ಆರೋಪದ ಮೇರೆಗೆ ಇವುಗಳ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಲಾಗಿದೆ.

ಎರಡು ಕಂಪನಿಗಳಿಂದಲೂ ಈ ಬಗ್ಗೆ ವಿವರ ಕೇಳಲಾಗಿದೆ. ನಿಷೇಧಕ್ಕೆ ಮೂಲ ಕಾರಣ ಏನೆಂಬುದರ ಬಗ್ಗೆ ಪರಿಶೀಲಿಸಲಾಗುವುದು. ಆ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT