ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂ‍ಪಾಯಿಯಲ್ಲಿ ವಹಿವಾಟಿಗೆ ಬಾಂಗ್ಲಾ, ಶ್ರೀಲಂಕಾ ಉತ್ಸುಕ: ಗೋಯಲ್

Published 11 ಮಾರ್ಚ್ 2024, 15:39 IST
Last Updated 11 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ನವದೆಹಲಿ: ‘ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಗಲ್ಫ್‌ ರಾಷ್ಟ್ರಗಳು ರಫ್ತು ಮತ್ತು ಆಮದು ವಹಿವಾಟುಗಳನ್ನು ಭಾರತದ ರೂಪಾಯಿಯಲ್ಲಿಯೇ ನಡೆಸಲು ಉತ್ಸುಕವಾಗಿವೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಹೇಳಿದ್ದಾರೆ.

‘ಹಲವು ಅಭಿವೃದ್ಧಿ ಹೊಂದಿದ ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳು ದ್ವಿಪಕ್ಷೀಯ ವ್ಯಾಪಾರ ವಹಿವಾಟನ್ನು ರೂಪಾಯಿಯಲ್ಲಿ ನಡೆಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ನಿರ್ವಹಣಾ ವೆಚ್ಚ ತಗ್ಗಲಿದೆ’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಈ ಸಂಬಂಧ ಬಾಂಗ್ಲಾ ಮತ್ತು ಶ್ರೀಲಂಕಾವು ಭಾರತದ ಜೊತೆಗೆ ಮಾತುಕತೆ ನಡೆಸಿವೆ. ಶೀಘ್ರವೇ, ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಗಲ್ಫ್‌ ರಾಷ್ಟ್ರಗಳು ಇದೇ ಹಾದಿಯನ್ನು ಎದುರು ನೋಡುತ್ತಿವೆ’ ಎಂದು ಹೇಳಿದ್ದಾರೆ. 

ಸ್ಥಳೀಯ ಕರೆನ್ಸಿಗಳಲ್ಲಿ ದ್ವಿಪಕ್ಷೀಯ ವ್ಯಾಪಾರ ನಡೆದರೆ ಉಭಯ ರಾಷ್ಟ್ರಗಳಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ ಎಂಬುದು ವಿದೇಶಗಳಿಗೆ ಅರ್ಥವಾಗುತ್ತಿದೆ ಎಂದು ಹೇಳಿದ್ದಾರೆ.

ಯುಎಇಯಿಂದ ಕಚ್ಚಾತೈಲ ಆಮದು ಮಾಡಿಕೊಂಡಿದ್ದ ಭಾರತವು ರೂಪಾಯಿ ಮೂಲಕವೇ ಹಣ ಪಾವತಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT