ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಆಫ್‌ ಬರೋಡಾ ಲಾಭ ₹ 506 ಕೋಟಿ

Last Updated 23 ಜೂನ್ 2020, 15:46 IST
ಅಕ್ಷರ ಗಾತ್ರ

ನವದೆಹಲಿ: 2019–20ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 506 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ಬ್ಯಾಂಕ್‌ ಆಫ್ ಬರೋಡಾ ಹೇಳಿದೆ.

2018–19ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 991 ಕೋಟಿ ನಿವ್ವಳ ಲಾಭ ಗಳಿಸಿತ್ತು. ವಿಜಯ ಮತ್ತು ದೇನಾ ಬ್ಯಾಂಕ್‌ಗಳು ವಿಲೀನವಾಗಿರುವುದರಿಂದ ಹಣಕಾಸು ಸಾಧನೆಯ ಅಂಕಿ–ಅಂಶಗಳನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ತ್ರೈಮಾಸಿಕದಲ್ಲಿ ವರಮಾನ ₹ 15,284 ಕೋಟಿಗಳಿಂದ ₹ 21,533 ಕೋಟಿಗಳಿಗೆ ಏರಿಕೆಯಾಗಿದೆ.

2019–20ನೇ ಹಣಕಾಸು ವರ್ಷಕ್ಕೆ ನಿವ್ವಳ ಲಾಭ ₹ 433 ಕೋಟಿಗಳಿಂದ ₹ 546 ಕೋಟಿಗಳಿಗೆ ಏರಿಕೆಯಾಗಿದೆ. ಅದೇ ರೀತಿ ವರಮಾನವೂ ₹ 56,065 ಕೋಟಿಗಳಿಂದ ₹ 86,300 ಕೋಟಿಗಳಿಗೆ ಏರಿಕೆಯಾಗಿದೆ.

ನಿವ್ವಳ ಎನ್‌ಪಿಎ ಶೇ 3.33ರಿಂದ ಶೇ 3.13ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT