ಶನಿವಾರ, ಅಕ್ಟೋಬರ್ 16, 2021
22 °C

ಬ್ಯಾಂಕ್ ಆಫ್ ಬರೋಡಾ ಗೃಹಸಾಲ ಅಗ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಬರೋಡಾ, ಗೃಹಸಾಲದ ಮೇಲಿನ ಬಡ್ಡಿ ದರವನ್ನು ಶೇಕಡ 0.25ರಷ್ಟು ಇಳಿಕೆ ಮಾಡಿದೆ. ಅಕ್ಟೋಬರ್ 7ರಿಂದ ಜಾರಿಗೆ ಬರುವಂತೆ ಗೃಹಸಾಲದ ಮೇಲಿನ ಬಡ್ಡಿ ದರವು ಶೇಕಡ 6.50ರಷ್ಟು ಆಗಿದೆ.

ಹಬ್ಬಗಳ ಸಂದರ್ಭದಲ್ಲಿ ಮನೆ ಖರೀದಿಯು ಗ್ರಾಹಕರಿಗೆ ಅಗ್ಗವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಕೊಡುಗೆಯು ಡಿಸೆಂಬರ್ 31ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

ಹೊಸ ಸಾಲಕ್ಕೆ ಮಾತ್ರವಲ್ಲದೆ, ಸಾಲ ವರ್ಗಾವಣೆ ಮಾಡಿಕೊಳ್ಳುವವರು ಕೂಡ ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬ್ಯಾಂಕ್ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು