ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್ ಆಫ್ ಬರೋಡದಿಂದ ಶೈಕ್ಷಣಿಕ ಸಾಲ

Last Updated 12 ಜುಲೈ 2022, 14:25 IST
ಅಕ್ಷರ ಗಾತ್ರ

ಬೆಂಗಳೂರು: ನರ್ಸರಿಯಿಂದ ಆರಂಭಿಸಿ ಉನ್ನತ ಶಿಕ್ಷಣದ ಹಂತದವರೆಗೆ ವಿದ್ಯಾರ್ಥಿಗಳಿಗೆ ಹಲವು ಬಗೆಯ ಸಾಲಗಳನ್ನು ವಿತರಿಸುವುದಾಗಿ ಬ್ಯಾಂಕ್ ಆಫ್ ಬರೋಡ ಹೇಳಿದೆ.

‘ಬರೋಡ ವಿದ್ಯಾ’ ಹೆಸರಿನಲ್ಲಿ ಹನ್ನೆರಡನೆಯ ತರಗತಿವರೆಗಿನ ಶಾಲಾ ಶಿಕ್ಷಣಕ್ಕೆ ₹ 4 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ‘ಬರೋಡ ಗ್ಯಾನ್’ ಹೆಸರಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಸಾಲ ವಿತರಣೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಎಂಬಿಎ, ಎಂಸಿಎ, ಎಂಎಸ್‌ನಂತಹ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ‘ಬರೋಡ ಸ್ಕಾಲರ್’ ಹೆಸರಿನಲ್ಲಿ ಗರಿಷ್ಠ ₹ 80 ಲಕ್ಷದವರೆಗೆ ಸಾಲ ವಿತರಣೆ ಮಾಡಲಾಗುತ್ತದೆ. ವಿದೇಶಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಸಾಲ ಸಿಗುತ್ತದೆ.

ತಾಂತ್ರಿಕ ಶಿಕ್ಷಣ ಪಡೆಯುವವರಿಗೆ ಕೌಶಲ ಸಾಲ ಯೋಜನೆಯ ಅಡಿಯಲ್ಲಿ ಗರಿಷ್ಠ ₹ 1.50 ಲಕ್ಷದವರೆಗೆ ಸಾಲ ನೀಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT