ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಂಕ್‌ ಆಫ್‌ ಬರೋಡಾಗೆ ಶೇ 19ರಷ್ಟು ಲಾಭ

Published 31 ಜನವರಿ 2024, 14:15 IST
Last Updated 31 ಜನವರಿ 2024, 14:15 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಬರೋಡಾ (ಬಿಒಬಿ) 2023–24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹4,579 ಕೋಟಿ ನಿವ್ವಳ ಲಾಭ ಗಳಿಸಿದೆ. 

2022–23ರ ಮೂರನೇ ತ್ರೈಮಾಸಿಕದಲ್ಲಿ ₹3,853 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 19ರಷ್ಟು ಹೆಚ್ಚಳವಾಗಿದೆ ಎಂದು ಷೇರುಪೇಟೆಗೆ  ಬ್ಯಾಂಕ್‌ ತಿಳಿಸಿದೆ.

ಒಟ್ಟು ವರಮಾನವು ₹27,092 ಕೋಟಿಯಿಂದ ₹31,416 ಕೋಟಿಗೆ ಏರಿಕೆಯಾಗಿದೆ. ಬಡ್ಡಿ ವರಮಾನವು ₹23,540 ಕೋಟಿಯಿಂದ ₹28,605 ಕೋಟಿಗೆ ಹೆಚ್ಚಳವಾಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 4.53ರಿಂದ ಶೇ 3.08ಕ್ಕೆ ಕುಗ್ಗಿದೆ. ನಿವ್ವಳ ಎನ್‌ಪಿಎ ಶೇ 0.99ರಿಂದ ಶೇ 0.70ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT