ನವದೆಹಲಿ (ಪಿಟಿಐ): ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾ (ಬಿಒಐ) ₹3,016 ಕೋಟಿ ನಿವ್ವಳ ಲಾಭ ಗಳಿಸಿದೆ.

2024–25ರ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹2,626 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 15ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಬ್ಯಾಂಕ್ನ ಒಟ್ಟು ವರಮಾನವು ₹21,751 ಕೋಟಿಯಿಂದ ₹22,685 ಕೋಟಿಗೆ ಏರಿಕೆಯಾಗಿದೆ. ಬಡ್ಡಿ ವರಮಾನವು ₹19,476 ಕೋಟಿಗೆ ತಲುಪಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣ (ಎನ್ಪಿಎ) ಶೇ 3.27ರಿಂದ ಶೇ 1.98ಕ್ಕೆ ಇಳಿದಿದೆ. ನಿವ್ವಳ ಎನ್ಪಿಎ ಶೇ 0.82ರಿಂದ ಶೇ 0.56ಕ್ಕೆ ಇಳಿದಿದೆ ಎಂದು ತಿಳಿಸಿದೆ.

2025–26ರ ಪೂರ್ಣ ಆರ್ಥಿಕ ವರ್ಷದಲ್ಲಿ ಬ್ಯಾಂಕ್ನ ಲಾಭದಲ್ಲಿ ಶೇ 14ರಷ್ಟು ಏರಿಕೆಯಾಗಿದ್ದು, ₹10,527 ಕೋಟಿಯಾಗಿದೆ. 2024–25ರಲ್ಲಿ ₹9,219 ಕೋಟಿಯಷ್ಟಾಗಿತ್ತು. ವರಮಾನವು ₹85,036 ಕೋಟಿ ಇದೆ.

₹10 ಮುಖಬೆಲೆಯ ಪ್ರತಿ ಷೇರಿಗೆ ₹4.65 ಲಾಭಾಂಶ ನೀಡಲು ಬ್ಯಾಂಕ್ನ ಆಡಳಿತ ಮಂಡಳಿ ಶಿಫಾರಸು ಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-1305326690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.