ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RBI ಸಭೆಗೂ ಮುನ್ನವೇ ಸಾಲದ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್‌ ಆಫ್‌ ಇಂಡಿಯಾ

Published 31 ಮಾರ್ಚ್ 2024, 14:19 IST
Last Updated 31 ಮಾರ್ಚ್ 2024, 14:19 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಗೂ ಮುನ್ನವೇ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಇಂಡಿಯಾವು (ಬಿಒಐ), ಸಾಲದ ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಏರಿಕೆ ಮಾಡಿದೆ.

ಹೊಸ ಬಡ್ಡಿದರವು ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ. ರೆಪೊ ದರ ಆಧರಿಸಿದ ಸಾಲದ ಮೇಲಿನ ಬಡ್ಡಿದರವನ್ನು (ಆರ್‌ಬಿಎಲ್‌ಆರ್‌) ಶೇ 9.30ಕ್ಕೆ ಹೆಚ್ಚಿಸಲಾಗಿದೆ ಎಂದು ಬ್ಯಾಂಕ್‌, ಷೇರುಪೇಟೆಗೆ ತಿಳಿಸಿದೆ.  

ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಬ್ಯಾಂಕ್‌, ಬಿಪಿಎಲ್‌ಆರ್‌ ಆಧಾರಿತ (ಬೆಂಚ್‌ಮಾರ್ಕ್‌ ಪ್ರೈಮ್‌ ಲೆಂಡಿಂಗ್ ರೇಟ್) ಸಾಲದ ಬಡ್ಡಿದರವನ್ನು ಶೇ 0.05ರಷ್ಟು ಹೆಚ್ಚಿಸಿದ್ದು, ಏಪ್ರಿಲ್‌ 3ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT