ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಮಹಾರಾಷ್ಟ್ರವು (ಬಿಒಎಂ) ಸಾಲದ ಮೇಲಿನ ಬಡ್ಡಿದರದಲ್ಲಿ ಶೇ 0.25ರಷ್ಟು ಕಡಿತಗೊಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೊ ದರ ಕಡಿತಗೊಳಿಸಿದ ಬೆನ್ನಲ್ಲೇ ಈ ಕ್ರಮಕೈಗೊಂಡಿದೆ.

ಸದ್ಯ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಶೇ 8.10ಕ್ಕೆ ಪರಿಷ್ಕರಿಸಲಾಗಿದೆ. ಇದು ಇಡೀ ಬ್ಯಾಂಕಿಂಗ್ ವಲಯದಲ್ಲಿಯೇ ಅತಿ ಕಡಿಮೆ ಬಡ್ಡಿದರವಾಗಿದೆ ಎಂದು ಬ್ಯಾಂಕ್, ಭಾನುವಾರ ತಿಳಿಸಿದೆ.

ಕಾರು ಸಾಲದ ಮೇಲಿನ ವಾರ್ಷಿಕ ಬಡ್ಡಿದರವನ್ನು ಶೇ 8.45ಕ್ಕೆ ಪರಿಷ್ಕರಿಸಲಾಗಿದೆ. ರೆಪೊ ಆಧರಿತ ಶಿಕ್ಷಣ ಹಾಗೂ ಇತರೆ ಸಾಲದ ಬಡ್ಡಿದರವನ್ನು (ಆರ್ಎಲ್ಎಲ್ಆರ್) ಇಳಿಸಲಾಗಿದೆ ಎಂದು ಹೇಳಿದೆ.

ಈಗಾಗಲೇ, ಗೃಹ ಹಾಗೂ ಕಾರು ಸಾಲದ ಮೇಲಿನ ಸಂಸ್ಕರಣಾ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಈಗ ಬಡ್ಡಿದರವೂ ಇಳಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ ಎಂದು ಹೇಳಿದೆ.

ಗುಜರಾತ್ನ ಗಿಫ್ಟ್ ಸಿಟಿಯಲ್ಲಿರುವ ಅಂತರರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರದಲ್ಲಿ (ಐಎಫ್ಎಸ್ಸಿ) ತನ್ನ ಮೊದಲ ಅಂತರರಾಷ್ಟ್ರೀಯ ಶಾಖೆ ತೆರೆಯಲು ಬ್ಯಾಂಕ್ ಆಫ್ ಮಹಾರಾಷ್ಟ್ರಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.