ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಮುಷ್ಕರ: ಇಂದು ಮತ್ತು ನಾಳೆ ಬ್ಯಾಂಕಿಂಗ್‌ ಸೇವೆಗಳಿಗೆ ಅಡ್ಡಿ ಸಂಭವ

Last Updated 15 ಮಾರ್ಚ್ 2021, 2:59 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಸೋಮವಾರ, ಮಂಗಳವಾರ ಮುಷ್ಕರ ನಡೆಸಲು ಕರೆ ನೀಡಿರುವ ಕಾರಣ ಕೆಲವು ಬ್ಯಾಂಕಿಂಗ್ ಸೇವೆಗಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.

ಬ್ಯಾಂಕ್‌ ಶಾಖೆಗಳಗೆ ಹೋಗಿ ಠೇವಣಿ ಇರಿಸುವುದು, ಶಾಖೆಗಳಿಂದ ಹಣ ಹಿಂದಕ್ಕೆ ಪಡೆಯುವುದು, ಚೆಕ್‌ ಕ್ಲಿಯರೆನ್ಸ್ ಮತ್ತು ಸಾಲ ಮಂಜೂರಾತಿ ಸೇವೆಗಳಲ್ಲಿ ವ್ಯತ್ಯಯ ಆಗಬಹುದು ಎನ್ನಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಬ್ಯಾಂಕ್‌ಗಳ 10 ಲಕ್ಷ ನೌಕರರು ಹಾಗೂ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಯುಎಫ್‌ಬಿಯು ಹೇಳಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT