ಶುಕ್ರವಾರ, ಅಕ್ಟೋಬರ್ 18, 2019
23 °C

ಬ್ಯಾಂಕ್‌ ಮುಷ್ಕರ ಕೈ ಬಿಟ್ಟ ಒಕ್ಕೂಟ

Published:
Updated:

ಬೆಂಗಳೂರು: ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟಗಳು ಇದೇ 26, 27ರಂದು ಕರೆ ನೀಡಿದ್ದ ಮುಷ್ಕರವನ್ನು ಕೈಬಿಟ್ಟಿವೆ.

ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಹಣಕಾಸು ಕಾರ್ಯದರ್ಶಿ ರಾಜೀವ್‌ ಕುಮಾರ್‌ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಮುಷ್ಕರ ಕೈಬಿಟ್ಟಿರುವುದಾಗಿ ಒಕ್ಕೂಟಗಳು ತಿಳಿಸಿವೆ.

ಬ್ಯಾಂಕ್‌ಗಳ ವಿಲೀನದಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚನೆ
ಮಾಡುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವೇತನ ಪರಿಷ್ಕರಣೆ, ವಾರದಲ್ಲಿ ಐದು ದಿನ ಕೆಲಸ, ಥರ್ಡ್‌ ಪಾರ್ಟಿ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕೈಬಿಡುವುದು ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಸಂಘಟನೆ (ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಎ), ಭಾರತೀಯ ರಾಷ್ಟ್ರೀಯ ಬ್ಯಾಂಕ್‌ ಅಧಿಕಾರಿಗಳ ಕಾಂಗ್ರೆಸ್‌ (ಐಎನ್‌ಬಿಒಸಿ) ಮತ್ತು ಬ್ಯಾಂಕ್‌ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆ (ಎನ್‌ಒಬಿಒ) ಮುಷ್ಕರಕ್ಕೆ ಕರೆ ನೀಡಿದ್ದವು.

Post Comments (+)