ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಆಫ್‌ ಇಂಡಿಯಾಗೆ ಶೇ 62 ಲಾಭ

Published 2 ಫೆಬ್ರುವರಿ 2024, 14:27 IST
Last Updated 2 ಫೆಬ್ರುವರಿ 2024, 14:27 IST
ಅಕ್ಷರ ಗಾತ್ರ

ನವದೆಹಲಿ : 2023–24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್‌ ಇಂಡಿಯಾವು ₹1,870 ಕೋಟಿ ನಿವ್ವಳ ಲಾಭ ಗಳಿಸಿದೆ.

2022–23ರ ಮೂರನೇ ತ್ರೈಮಾಸಿಕದಲ್ಲಿ ₹1,151 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಮೂರನೇ ತ್ರೈಮಾಸಿದಲ್ಲಿನ ಲಾಭದಲ್ಲಿ ಶೇ 62ರಷ್ಟು ಏರಿಕೆ ಆಗಿದೆ ಎಂದು ಬ್ಯಾಂಕ್‌ ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.

ಬಡ್ಡಿ ವರಮಾನವು ₹12,728 ಕೋಟಿಯಿಂದ ₹15,218 ಕೋಟಿಗೆ ಹೆಚ್ಚಳವಾಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 7.66ರಿಂದ ಶೇ 5.35ಕ್ಕೆ ಇಳಿಕೆಯಾಗಿದೆ. ನಿವ್ವಳ ಎನ್‌ಪಿಎ ಶೇ 1.61ರಿಂದ ಶೇ 1.14ಕ್ಕೆ ಕುಗ್ಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT