ಭಾನುವಾರ, ಜೂನ್ 20, 2021
21 °C

ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕ್‌ಗಳಿಗೆ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

ಉದ್ಯಮಿ ವಿಜಯ್ ಮಲ್ಯ

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಅವರ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳನ್ನು ಹಾಗೂ ಷೇರುಗಳನ್ನು ಮಾರಾಟ ಮಾಡಲು ಅವರಿಗೆ ಸಾಲ ನೀಡಿರುವ ಬ್ಯಾಂಕ್‌ಗಳಿಗೆ ಹಾದಿ ಮುಕ್ತವಾಗಿದೆ.

ಜಾರಿ ನಿರ್ದೇಶನಾಲಯ (ಇ.ಡಿ.) ವಶಪಡಿಸಿಕೊಂಡಿರುವ, ಮಲ್ಯ ಅವರ ಆಸ್ತಿಗಳನ್ನು ತಮಗೆ ಮರಳಿಸಬೇಕು ಎಂದು ಕೋರಿ ಭಾರತೀಯ ಸ್ಟೇಟ್‌ ಬ್ಯಾಂಕ್ (ಎಸ್‌ಬಿಐ) ನೇತೃತ್ವದ 11 ಬ್ಯಾಂಕ್‌ಗಳ ಒಕ್ಕೂಟವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ರಚಿಸಿರುವ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು. ಬ್ಯಾಂಕ್‌ಗಳ ಈ ಒಕ್ಕೂಟವು ಮಲ್ಯ ಅವರಿಗೆ ಸಾಲ ನೀಡಿದೆ.

₹ 5,646 ಕೋಟಿ ಮೌಲ್ಯದ ಆಸ್ತಿಗಳನ್ನು ಬ್ಯಾಂಕ್‌ಗಳಿಗೆ ಮರಳಿಸಬೇಕು ಎಂದು ನ್ಯಾಯಾಲಯವು ಮಂಗಳವಾರ ಆದೇಶಿಸಿದೆ. ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಆಸ್ತಿಗಳ ಸಾಂಕೇತಿಕ ಹಸ್ತಾಂತರ ಕಾರ್ಯವನ್ನು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಡೆಸಲಾಗುವುದು ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು