ಮಂಗಳವಾರ, ಜನವರಿ 26, 2021
25 °C

ಸರಾಸರಿ ಎನ್‌ಪಿಎ ಶೇ 13.5ಕ್ಕೆ ಏರಿಕೆ: ಆರ್‌ಬಿಐ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಬ್ಯಾಂಕ್‌ಗಳ ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಈ ವರ್ಷದ ಸೆಪ್ಟೆಂಬರ್‌ ವೇಳೆಗೆ ಶೇಕಡ 13.5ಕ್ಕೆ ಏರಿಕೆಯಾಗಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ಸ್ಥಿರತೆ ವರದಿಯಲ್ಲಿ ಹೇಳಲಾಗಿದೆ.

2020ರ ಸೆಪ್ಟೆಂಬರ್‌ನಲ್ಲಿ ಸರಾಸರಿ ಎನ್‌ಪಿಎ ಶೇ 7.5ರಷ್ಟು ಇತ್ತು. ಆರ್ಥಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಲ್ಲಿ ಸರಾಸರಿ ಎನ್‌ಪಿಎ ಶೇ 14.8ಕ್ಕೂ ಏರಿಕೆಯಾಗುವ ಸಾಧ್ಯತೆ ಇದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಜಿಎನ್‌ಪಿಎ ಶೇ 9.7ರಿಂದ ಶೇ 16.2ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಅದೇ ರೀತಿ, ಖಾಸಗಿ ಬ್ಯಾಂಕ್‌ಗಳ ಜಿಎನ್‌ಪಿಎ ಶೇ 4.6ರಿಂದ ಶೇ 7.9ಕ್ಕೆ ಹಾಗೂ ವಿದೇಶಿ ಬ್ಯಾಂಕ್‌ಗಳ ಜಿಎನ್‌ಪಿಎ ಶೇ 2.5ರಿಂದ ಶೇ 5.4ಕ್ಕೆ ಏರಿಕೆಯಾಗಲಿದೆ ಎಂದು ವರದಿಯಲ್ಲಿ  ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು