ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

42 ಲಕ್ಷ ಎಂಎಸ್‌ಎಂಇಗಳಿಗೆ ₹ 1.63 ಲಕ್ಷ ಕೋಟಿ ಸಾಲ ಮಂಜೂರು

Last Updated 13 ಸೆಪ್ಟೆಂಬರ್ 2020, 14:25 IST
ಅಕ್ಷರ ಗಾತ್ರ

ನವದೆಹಲಿ: ಸಾಲ ಖಾತರಿ ಯೋಜನೆಯಡಿ ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ (ಎಂಎಸ್‌ಎಂಇ) 42 ಲಕ್ಷಕ್ಕೂ ಅಧಿಕ ಉದ್ದಿಮೆಗಳಿಗೆ ₹ 1.63 ಲಕ್ಷ ಕೋಟಿ ಸಾಲ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಸೆಪ್ಟೆಂಬರ್‌ 10ರವರೆಗೆ 25 ಲಕ್ಷ ಎಂಎಸ್‌ಎಂಇಗಳಿಗೆ ₹ 1.18 ಲಕ್ಷ ಕೋಟಿ ಸಾಲ ವಿತರಣೆ ಮಾಡಲಾಗಿದೆ. ‘ಕೋವಿಡ್‌–19’ನಿಂದ ಸಂಕಷ್ಟಕ್ಕೆ ಸಿಲುಕಿರುವ ಉದ್ಯಮಗಳಿಗೆ ನೆರವಾಗುವ ಉದ್ದೇಶದಿಂದ ಶೇಕಡ 100ರಷ್ಟು ಸಾಲ ಖಾತರಿ ಯೋಜನೆಯಡಿ ಬ್ಯಾಂಕ್‌ಗಳು ಈ ನೆರವು ನೀಡುತ್ತಿವೆ.

ಆತ್ಮನಿರ್ಭರ ಭಾರತ ಅಭಿಯಾನ ಪ್ಯಾಕೇಜ್‌ನಲ್ಲಿ ₹ 20.97 ಲಕ್ಷ ಕೋಟಿ ಮೊತ್ತದ ಆರ್ಥಿಕ ಕೊಡುಗೆಯನ್ನು ಸರ್ಕಾರ ಘೋಷಿಸಿದೆ. ಇದರ ಭಾಗವಾಗಿ ಬ್ಯಾಂಕ್‌ಗಳು ಸಾಲ ವಿತರಣೆ ಮಾಡಲು ಆರಂಭಿಸಿವೆ.

ತೆರಿಗೆ ಮರುಪಾವತಿ: ಏಪ್ರಿಲ್‌ 1 ರಿಂದ ಸೆಪ್ಟೆಂಬರ್‌ 8ರ ನಡುವಿನ ಅವಧಿಯಲ್ಲಿ 27.55 ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ₹ 1.01 ಲಕ್ಷ ಕೋಟಿ ತೆರಿಗೆ ಮರುಪಾವತಿ ಮಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT