ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಮುಷ್ಕರದಿಂದ ವಹಿವಾಟಿಗೆ ಧಕ್ಕೆ

ವಿಲೀನ ಬೇಡ, ಆರ್ಥಿಕ ಸ್ಥಿತಿ ಬಲಪಡಿಸಿ: ಸರ್ಕಾರಕ್ಕೆ ಸಂಘಟನೆಗಳ ಒತ್ತಾಯ
Last Updated 26 ಡಿಸೆಂಬರ್ 2018, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕ್‌ ಆಫ್‌ ಬರೋಡಾ (ಬಿಒಬಿ), ದೇನಾ ಮತ್ತು ವಿಜಯ ಬ್ಯಾಂಕ್‌ಗಳ ವಿಲೀನ ಪ್ರಸ್ತಾವವನ್ನು ವಿರೋಧಿಸಿ ಬ್ಯಾಂಕ್‌ ಉದ್ಯೋಗಿಗಳ ಸಂಘಟನೆ ಬುಧವಾರ ದೇಶವ್ಯಾಪಿ ಮುಷ್ಕರ ನಡೆಸಿತು. ಇದರಿಂದ ಬ್ಯಾಂಕಿಂಗ್‌ ವಹಿವಾಟಿಗೆ ಧಕ್ಕೆಯಾಗಿದೆ.

ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಕರೆ ನೀಡಿದ್ದ ಮುಷ್ಕರದಲ್ಲಿ 9 ಸಂಘಟನೆಗಳೂ ಭಾಗಿಯಾಗಿದ್ದವು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ್ದ ಬ್ಯಾಂಕ್‌ಗಳ ಉದ್ಯೋಗಿಗಳು ಮತ್ತು ಬ್ಯಾಂಕ್‌ ಸಂಘಟನೆಗಳ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ‘ಸಹವರ್ತಿ ಬ್ಯಾಂಕ್‌ಗಳನ್ನು ಎಸ್‌ಬಿಐನೊಂದಿಗೆ ವಿಲೀನಗೊಳಿಸಿದ ಬಳಿಕ ನಷ್ಟದ ಪ್ರಮಾಣ ₹ 1.77 ಲಕ್ಷ ಕೋಟಿಯಿಂದ ₹ 2.25 ಲಕ್ಷ ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ವಿಲೀನಕ್ಕೆ ಬದಲಾಗಿ ಬ್ಯಾಂಕ್‌ಗಳನ್ನು ಆರ್ಥಿಕವಾಗಿ ಬಲಪಡಿಸಲು ಸರ್ಕಾರ ಗಮನ ಹರಿಸಬೇಕು’ ಎಂದುಯುಎಫ್‌ಬಿಯುನ ಕರ್ನಾಟಕದ ಸಂಚಾಲಕ ಎಚ್‌.ವಿ.ರೈ ಒತ್ತಾಯಿಸಿದರು.

ಗ್ರಾಹಕರ ಹಿತರಕ್ಷಣೆಯ ಉದ್ದೇಶದಿಂದ ವಿಲೀನದ ನಿರ್ಧಾರ ಕೈಗೊಂಡಿಲ್ಲ. ಇದರಿಂದ ಬ್ಯಾಂಕ್‌ಗಳಲ್ಲಿನ ಸಿಬ್ಬಂದಿಯ ಉದ್ಯೋಗಕ್ಕೂ ಭದ್ರತೆ ಸಿಗುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT