ಮಾರ್ಚ್‌ನಲ್ಲಿ ಎರಡು ದಿನ ಬ್ಯಾಂಕ್ ಮುಷ್ಕರ
ನವದೆಹಲಿ: ಕೇಂದ್ರ ಸರ್ಕಾರದ ಮಾಲೀಕತ್ವದಲ್ಲಿರುವ ಎರಡು ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಮಾರ್ಚ್ 15 ಮತ್ತು 16ರಂದು ಮುಷ್ಕರ ನಡೆಸುವಂತೆ ‘ಬ್ಯಾಂಕ್ ಸಂಘಟನೆಗಳ ಸಂಯುಕ್ತ ಒಕ್ಕೂಟ’ ಕರೆ ನೀಡಿದೆ. ಇದು ಒಂಭತ್ತು ಸಂಘಟನೆಗಳ ಒಕ್ಕೂಟ.
ಬ್ಯಾಂಕ್ ಖಾಸಗೀಕರಣ ಪ್ರಸ್ತಾವನೆಯನ್ನು ವಿರೋಧಿಸಲು ಮಂಗಳವಾರ ನಡೆದ ಒಕ್ಕೂಟದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.