ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಲಿಕಾಂ ಕಂಪನಿಗಳು ದಿವಾಳಿಯಾದರೆ ಬ್ಯಾಂಕ್‌ಗಳೇ ಬೆಲೆ ತೆರಬೇಕಾದೀತು: ರಜನೀಶ್

ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿಕೆ
Last Updated 15 ಫೆಬ್ರುವರಿ 2020, 14:50 IST
ಅಕ್ಷರ ಗಾತ್ರ

ನವದೆಹಲಿ:ಟೆಲಿಕಾಂ ಕಂಪನಿಗಳು ದಿವಾಳಿಯಾದರೆ ಬ್ಯಾಂಕ್‌ಗಳೇ ಬೆಲೆ ತೆರಬೇಕಾದೀತು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಅಧ್ಯಕ್ಷ ರಜನೀಶ್ ಕುಮಾರ್ ಶನಿವಾರ ಹೇಳಿದ್ದಾರೆ.

ಕೆಂದ್ರ ಸರ್ಕಾರಕ್ಕೆ ₹ 1.47 ಲಕ್ಷ ಕೋಟಿ ಬಾಕಿ ಪಾವತಿಸುವ ಸಂಬಂಧ ಸುಪ್ರೀಂಕೋರ್ಟ್‌ ಶುಕ್ರವಾರ ದೂರಸಂಪರ್ಕ ಸೇವಾ ಕಂಪನಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

ನಾವು ಕಾದು ನೋಡಲಿದ್ದೇವೆ ಎಂದಿರುವರಜನೀಶ್ ಕುಮಾರ್, ಟೆಲಿಕಾಂ ಕಂಪನಿಗಳು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವ ಹೊಣೆಗಾರಿಕೆ ಸರ್ಕಾರದ ಅಧೀನದಲ್ಲಿರುವ ದೂರಸಂಪರ್ಕ ಇಲಾಖೆಗೆ ಸಂಬಂಧಿಸಿದ್ದು ಎಂದಿದ್ದಾರೆ.

‘ಯಾವುದೇ ಒಂದು ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮವಾದರೆ ಅದು ದೊಡ್ಡ ವ್ಯವಸ್ಥೆಯೊಂದರ ಮೇಲೆಯೇ ಪರಿಣಾಮ ಬೀರುತ್ತದೆ. ಬ್ಯಾಂಕ್, ಉದ್ಯೋಗಿ, ಗ್ರಾಹಕ ಎಲ್ಲರಿಗೂ ಅದು ತಟ್ಟುತ್ತದೆ. ಹೀಗಾಗಿ ನಾವೂ ಬೆಲೆ ತೆರಬೇಕಾಗುತ್ತದೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT