ಆರ್‌ಬಿಐ ನೀಡಿರುವ ಮಾಹಿತಿಯ ಪ್ರಕಾರ, ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‌ಗಳು ಕಳೆದ ಐದು ಹಣಕಾಸು ವರ್ಷಗಳಲ್ಲಿ ₹10.57 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಮಾಡಿವೆ. ಇದೇ ಅವಧಿಯಲ್ಲಿ ವಸೂಲಾಗದ ಒಟ್ಟು ಸಾಲದಲ್ಲಿ (ಎನ್‌ಪಿಎ) ₹7.15 ಲಕ್ಷ ಕೋಟಿಯನ್ನು ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರಾಡ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.