ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹14.56 ಲಕ್ಷ ಕೋಟಿ ಸಾಲ ರೈಟ್‌ಆಫ್‌

Published 7 ಆಗಸ್ಟ್ 2023, 13:49 IST
Last Updated 7 ಆಗಸ್ಟ್ 2023, 13:49 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ ಬ್ಯಾಂಕ್‌ಗಳು ಒಟ್ಟು ₹14.56 ಲಕ್ಷ ಕೋಟಿ ವಸೂಲಾಗದ ಸಾಲವನ್ನು (ಎನ್‌ಪಿಎ) ರೈಟ್‌ಆಫ್‌ ಮಾಡಿವೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರಾಡ್ ಅವರು ಲೋಕಸಭೆಗೆ ಸೋಮವಾರ ಈ ಮಾಹಿತಿ ನೀಡಿದ್ದಾರೆ.

ರೈಟ್‌ಆಫ್‌ ಮಾಡಿರುವ ಒಟ್ಟು ಮೊತ್ತದಲ್ಲಿ ₹7.40 ಲಕ್ಷ ಕೋಟಿಯಷ್ಟು ದೊಡ್ಡ ಕೈಗಾರಿಕೆಗಳು ಮತ್ತು ಸೇವೆಗಳಿಗೆ ಸಂಬಂಧಿಸಿದ ವಸೂಲಾಗದ ಸಾಲದ ಮೊತ್ತವಾಗಿದೆ ಎಂದು ಅವರು ಹೇಳಿದ್ದಾರೆ.

2014ರ ಏಪ್ರಿಲ್‌ನಿಂದ 2023ರ ಮಾರ್ಚ್‌ವರೆಗಿನ ಅವಧಿಯಲ್ಲಿ ವಾಣಿಜ್ಯ ಬ್ಯಾಂಕ್‌ಗಳು ರೈಟ್‌ಆಫ್‌ ಮಾಡಿದ ಸಾಲದಲ್ಲಿ ₹2.04 ಲಕ್ಷ ಕೋಟಿ ಸಾಲವನ್ನು ವಸೂಲಿ ಮಾಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT