ನವದೆಹಲಿ: ಜನವರಿಯಲ್ಲಿ ಕರ್ನಾಟಕದಲ್ಲಿ ಬಿಯರ್ ಮೇಲೆ ತೆರಿಗೆ ಹೆಚ್ಚಿಸಲಾಗಿತ್ತು. ಇದರಿಂದ ಮಾರಾಟದಲ್ಲಿ ಇಳಿಕೆಯಾಗುತ್ತಿದೆ ಎಂದು ಬ್ರುವರಿಸ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಹೇಳಿದೆ.

ಕಳೆದ 18 ತಿಂಗಳ ಅವಧಿಯಲ್ಲಿ ಮೂರು ಬಾರಿ ತೆರಿಗೆ ಹೆಚ್ಚಿಸಲಾಗಿದೆ. ಬಿಯರ್ ವಲಯದಲ್ಲಿ ಕಂಪನಿಗಳು ₹5 ಸಾವಿರ ಕೋಟಿ ಹೂಡಿಕೆ ಮಾಡಿವೆ. ಸರ್ಕಾರವು ಮತ್ತಷ್ಟು ತೆರಿಗೆ ಹೆಚ್ಚಿಸಲು ಮುಂದಾದರೆ ಈ ಉದ್ಯಮವು ಸಂಕಷ್ಟಕ್ಕೆ ಸಿಲುಕಲಿದೆ ಎಂದು ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಅಸೋಸಿಯೇಷನ್ ತಿಳಿಸಿದೆ.

ಕಳೆದ ವರ್ಷದ ಫೆಬ್ರುವರಿಯಲ್ಲಿ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10ರಷ್ಟು ಹೆಚ್ಚಿಸಿತ್ತು. ಪ್ರಸಕ್ತ ವರ್ಷದ ಜನವರಿಯಲ್ಲಿ ಪ್ರತಿ ಬಾಟಲಿ ಬಿಯರ್ ದರವನ್ನು ₹10 ಹೆಚ್ಚಿಸಿತ್ತು.

2023–24ರಲ್ಲಿ ಬಿಯರ್ ಕೈಗಾರಿಕೆಯಿಂದ ಕರ್ನಾಟಕದ ಬೊಕ್ಕಸಕ್ಕೆ ₹5,500 ಕೋಟಿ ಆದಾಯ ಲಭಿಸಿದೆ. ರಾಜ್ಯದಲ್ಲಿ ಮದ್ಯ ತಯಾರಿಸುವ 10 ಕಂಪನಿಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.