ಬೆಳಗಾವಿ: ‘ಎಲ್ಲ ವಲಯಗಳ ವ್ಯಾಪಾರ ಸ್ಥರ ಅನುಕೂಲಕ್ಕಾಗಿ ಕರ್ನಾಟಕದಲ್ಲೂ ರಾಜ್ಯಮಟ್ಟದ ವ್ಯಾಪಾರ ಅಭಿವೃದ್ಧಿ ನಿಗಮ ಸ್ಥಾಪಿಸುವ ಅಗತ್ಯವಿದೆ’ ಎಂದು ರಾಷ್ಟ್ರೀಯ ವ್ಯಾಪಾರ ಅಭಿವೃದ್ಧಿ ನಿಗ ಮದ ಅಧ್ಯಕ್ಷ ಸುನಿಲ ಶಿಂಘಿ ಹೇಳಿದರು.

ಇಲ್ಲಿ ಜೈನ ಇಂಟರ್ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್(ಜಿತೋ) ವತಿಯಿಂದ ಹಮ್ಮಿಕೊಂಡಿದ್ದ ಹರ್ಷೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ರಾಷ್ಟ್ರೀಯ ವ್ಯಾಪಾರ ಅಭಿವೃದ್ಧಿ ನಿಗಮದ ಮೂಲಕ ಹಲವು ರಾಜ್ಯಗಳಲ್ಲಿ ರಾಜ್ಯಮಟ್ಟದ ವ್ಯಾಪಾರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ರಾಜಸ್ಥಾನ, ಗೋವಾ, ಗುಜರಾತ್ನಲ್ಲಿ ಅವು ಉತ್ತಮವಾಗಿ ಕೆಲಸ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿಯೂ ವ್ಯಾಪಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕಾಗಿದೆ’ ಎಂದರು.

ಶಾಸಕ ಅಭಯ ಪಾಟೀಲ, ‘ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ದೊಡ್ಡ ಮತ್ತು ಮಧ್ಯಮ ವರ್ಗದ ಉದ್ದಿಮೆಗಳಿಗೆ ಹೊಸ ಆಯಾಮ ಮತ್ತು ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಅವಶ್ಯಕತೆ ಇದೆ’ ಎಂದು ತಿಳಿಸಿದರು. ಜಿತೋ ಕೆಕೆಜಿ ವಲಯದ ಅಧ್ಯಕ್ಷ ಪ್ರವೀಣ ಬಾಫನಾ, ಪ್ರಧಾನ ಕಾರ್ಯದರ್ಶಿ ದಿಲೀಪ ಜೈನ , ಜಿತೋ ಅಪೆಕ್ಸ್ ಅಲ್ಪಸಂಖ್ಯಾತ ವಿಭಾಗದ ನಿರ್ದೇಶಕ ಪುಷ್ಪಕ ಹನಮಣ್ಣವರ, ನಿರ್ದೇಶಕ ನರೇಂದ್ರಸಿಂಗ್ ಸಾಮರ,ಕಾರ್ಯದರ್ಶಿ ಶ್ರೀಪಾಲ ಬಚಾಚತ, ರವಿರಾಜ ಪಾಟೀಲ ಇದ್ದರು.

ಜಿತೋ ಬೆಳಗಾವಿ ವಿಭಾಗದ ಅಧ್ಯಕ್ಷ ಹರ್ಷವರ್ಧನ ಇಂಚಲ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ವಿಕ್ರಮ ಜೈನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಅಭಯ ಆದಿಮನಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-21-2090154820

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.