ಬುಧವಾರ, ಸೆಪ್ಟೆಂಬರ್ 22, 2021
29 °C

ಷೇರು ಮಾರುಕಟ್ಟೆ: ಸೆನ್ಸೆಕ್ಸ್ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಬ್ಯಾಂಕಿಂಗ್, ಎಫ್‌ಎಂಸಿಜಿ ಮತ್ತು ಫಾರ್ಮಾ ವಲಯದ ಷೇರುಗಳ ಖರೀದಿ ಹೆಚ್ಚಿದ್ದ ಕಾರಣದಿಂದಾಗಿ ದೇಶದ ಷೇರು ಮಾರುಕಟ್ಟೆ ಸೂಚ್ಯಂಕಗಳು ಶುಕ್ರವಾರ ಏರಿಕೆ ಕಂಡವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 138 ಅಂಶ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 32 ಅಂಶ ಏರಿಕೆ ಕಂಡವು. ಸೋಮವಾರದಿಂದ ಶುಕ್ರವಾರದವರೆಗಿನ ಇಡೀ ವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 164 ಅಂಶ, ನಿಫ್ಟಿ 67 ಅಂಶ ಇಳಿಕೆ ಕಂಡಂತಾಗಿದೆ.

ಬಿಎಸ್‌ಇ ರಿಯಾಲ್ಟಿ, ಬ್ಯಾಂಕ್‌, ಎಫ್‌ಎಂಸಿಜಿ, ಹಣಕಾಸು ಮತ್ತು ಲೋಹ ವಲಯದ ಸೂಚ್ಯಂಕಗಳು ಏರಿಕೆ ದಾಖಲಿಸಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ‍ಪ್ರತಿ ಬ್ಯಾರೆಲ್‌ಗೆ 73.78 ಅಮೆರಿಕನ್ ಡಾಲರ್‌ಗೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆಯಷ್ಟು ಹೆಚ್ಚಳವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು