ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಳಿಕೆಗೆ ಸೆನ್ಸೆಕ್ಸ್ ವಿರಾಮ

Last Updated 25 ಜನವರಿ 2022, 16:49 IST
ಅಕ್ಷರ ಗಾತ್ರ

ಮುಂಬೈ: ಐದು ದಿನಗಳಿಂದ ಇಳಿಕೆಯ ಹಾದಿಯಲ್ಲಿ ಇದ್ದ ದೇಶಿ ಷೇರುಪೇಟೆ ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಏರಿಕೆ ದಾಖಲಿಸಿದವು. ಹೂಡಿಕೆದಾರರು ಬ್ಯಾಂಕಿಂಗ್, ಆಟೊಮೊಬೈಲ್‌ ಮತ್ತು ಎಫ್‌ಎಂಸಿಜಿ ವಲಯದ ಷೇರುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದರು.

ಹೀಗಿದ್ದರೂ, ಅಮೆರಿಕದ ಫೆಡರಲ್ ರಿಸರ್ವ್‌ನ ಸಭೆಯ ತೀರ್ಮಾನ ಹೊರಬೀಳುವವರೆಗೆ ಮಾರುಕಟ್ಟೆಯಲ್ಲಿ ಎಚ್ಚರಿಕೆಯ ವಹಿವಾಟು ನಡೆಯಲಿದೆ ಎಂದು ವರ್ತಕರು ಹೇಳಿದ್ದಾರೆ. ರಷ್ಯಾ–ಉಕ್ರೇನ್ ಬಿಕ್ಕಟ್ಟು, ವಿದೇಶಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡುತ್ತಿರುವುದು ಹಾಗೂ ಹಣದುಬ್ಬರವು ಕಡಿಮೆ ಆಗುತ್ತಿಲ್ಲದಿರುವುದು ಕೂಡ ಹೂಡಿಕೆದಾರರ ಚಿಂತೆಗೆ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.

ಮಂಗಳವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 366 ಅಂಶ ಏರಿಕೆ ಕಂಡು 57,858 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 128 ಅಂಶ ಏರಿಕೆ ಕಂಡು 17,277 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಮಾರುತಿ ಸುಜುಕಿ ಕಂಪನಿಯ ಷೇರುಗಳು ಸೆನ್ಸೆಕ್ಸ್‌ನಲ್ಲಿ ಅತಿಹೆಚ್ಚು ಗಳಿಕೆ ಕಂಡವು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡ 0.89ರಷ್ಟು ಏರಿಕೆ ಕಂಡಿದ್ದು ಪ್ರತಿ ಬ್ಯಾರೆಲ್‌ಗೆ 87.04 ಅಮೆರಿಕನ್ ಡಾಲರ್‌ಗೆ ತಲುಪಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 18 ಪೈಸೆ ಇಳಿಕೆಯಾಗಿ ₹ 74.78ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT